ಕಾಂಗ್ರೆಸ್ ಪಕ್ಷವು ಚುನಾವಣೆ ಮುಂಚೆ ನೀಡಿದ್ದ ಪಂಚಖಾತ್ರಿ ಭರವಸೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಎರಡನೇ ಗ್ಯಾರಂಟಿ ಕಾರ್ಡ್ ಯೋಜನೆ ಯಾಗಿ ಘೋಷಣೆಯಾಗಿದ್ದ ಗೃಹಲಕ್ಷ್ಮಿ ಯೋಜನೆ ಅಡಿ ಕಾಂಗ್ರೆಸ್ ಸರ್ಕಾರ ಸ್ಥಾಪನೆಯಾದರೆ ರಾಜ್ಯದ ಎಲ್ಲಾ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗೆ ಸಹಾಯಧನ ನೀಡಿ ಅವರ ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು ಎಂದು ಪಕ್ಷವು ಭರವಸೆ ನೀಡಿತ್ತು.
ಅಂತೆಯೇ ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆ 2023 ರಲ್ಲಿ ಗೆದ್ದ ಬಳಿಕ ಈ ಯೋಜನೆ ಅನುಷ್ಠಾನಕ್ಕೆ ಸಿದ್ಧಗೊಂಡಿದೆ. ಇದಕ್ಕಿರುವ ರೂಪುರೇಷೆಗಳ ಬಗ್ಗೆ ನಿಬಂಧನೆ ಮತ್ತು ಮಾರ್ಗಸೂಚಿಗಳ ಬಗ್ಗೆ ಆದೇಶ ಪತ್ರವೂ ಕೂಡ ಮುಖ್ಯಮಂತ್ರಿಗಳಿಂದ ಬಿಡುಗಡೆ ಆಗಿದೆ. ಅದರಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಕೂಡ ತಿಳಿಸಲಾಗಿತ್ತು.
ಆಗಸ್ಟ್ 15ರಂದು ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಈ ಗೃಹಲಕ್ಷ್ಮಿ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆ ಖಾತೆಗೆ ಸಹಾಯಧನವನ್ನು ನೇರವಾಗಿ DBT ಮೂಲಕ ಜಮೆ ಮಾಡಲಾಗುವುದು. ಇದಕ್ಕೂ ಪೂರ್ವವಾಗಿ ಫಲಾನುಭವಿಗಳನ್ನು ಗುರುತಿಸುವುದಕ್ಕಾಗಿ ಜೂನ್ 15ರಿಂದ ಜುಲೈ 15 ರವರೆಗೆ ಅರ್ಜಿ ಆಹ್ವಾನ ಮಾಡಲಾಗುವುದು, ಜುಲೈ 15 ರಿಂದ ಆಗಸ್ಟ್ 15 ರವರೆಗೆ ಇವುಗಳ ಪರಿಶೀಲನೆ ಕಾರ್ಯ ನಡೆಯುತ್ತದೆ.
ನಂತರ ಆಗಸ್ಟ್ 15ರಂದು ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಕರ್ನಾಟಕ ಒನ್ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಕುಟುಂಬದ ಯಜಮಾನಿ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದು ಮತ್ತು ಆಫ್ಲೈನ್ ಅಲ್ಲೂ ಕೂಡ ಇದಕ್ಕೆ ಅವಕಾಶವಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಸಂಬಂಧ ಪಟ್ಟ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರ ತಿಳಿಸಿತ್ತು. ಆದರೆ ಜೂನ್ 15 ರಂದು ಈ ಅರ್ಜಿ ಆಹ್ವಾನ ಕಾರ್ಯಕ್ರಮ ಆರಂಭವಾಗಿಲ್ಲ ಇನ್ನು ಸಹ ಯೋಜನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸಿಬ್ಬಂದಿಗಳಿಗೆ ತರಬೇತಿ ನೀಡಲು ಕಾಲಾವಕಾಶ ಬೇಕಾದ ಕಾರಣ ಒಂದು ದಿನ ವಿಳಂಬವಾಗಿ ಅಂದರೆ ಜೂನ್ 16ರಂದು ಈ ಪ್ರಕ್ರಿಯೆ ಆರಂಭಿಸಲಾಗುವುದು.
ಜೂನ್ 16ರ ಮಧ್ಯಾಹ್ನದಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೇ ಇದಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎನ್ನುವ ಮಾಹಿತಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಕೇಳಿ ಬಂದಿತ್ತು. ಆದರೆ ಈಗ ಕಾರಣಾಂತರಗಳಿಂದ ಇನ್ನು ಕೆಲವು ದಿನಗಳು ಇದು ಮುಂದೆ ಹೋಗಿದೆ. ಈಗ ಬಂದಿರುವ ಮಾಹಿತಿಯ ಪ್ರಕಾರ ಸರ್ಕಾರ ಇದಕ್ಕಾಗಿ ಆಪ್ ಒಂದನ್ನು ಸಿದ್ಧಗೊಳಿಸುತ್ತಿದೆಯಂತೆ.
ಆ ಆಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸರಾಗವಾಗುವ ಕಾರಣ ಇದನ್ನು ಸಿದ್ಧಪಡಿಸಲು ಉಂಟಾಗಿರುವ ತಾಂತ್ರಿಕ ದೋಷಗಳಿಂದಾಗಿ ಈ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ. ಆದ್ದರಿಂದ ಇನ್ನೂ ಮೂರ್ನಾಲ್ಕು ದಿನಗಳು ಹೆಚ್ಚಿನ ಕಾಲಾವಕಾಶ ಬೇಕಾಗಬಹುದು ಎನ್ನುವ ಮಾಹಿತಿ ಸರ್ಕಾರದಿಂದ ತಿಳಿದು ಬಂದಿದೆ.
ಸದ್ಯಕ್ಕೆ ಈಗ ಸೇವಾ ಸಿಂಧು ಪೋರ್ಟಲ್ ಅಲ್ಲಿ ಸರ್ಚ್ ಮಾಡಿ ನೋಡಿದರೂ ಕೂಡ ಗೃಹಲಕ್ಷ್ಮಿ ಯೋಜನೆಯ ಸೇವೆಗಳ ಬಗ್ಗೆ ಮಾಹಿತಿ ಸಿಗುವುದಿಲ್ಲ ಮತ್ತು ಅದಕ್ಕೆ ಅರ್ಜಿ ಹಾಕಲು ಕೂಡ ಸಾಧ್ಯವಾಗುವುದಿಲ್ಲ. ಈ ಬಗ್ಗೆ ಗೊಂದಲಕ್ಕೆ ಒಳಗಾಗುವುದು ಬೇಡ ಶೀಘ್ರದಲ್ಲಿಯೇ ಈ ಯೋಜನೆಯನ್ನು ಅರ್ಜಿ ಆಹ್ವಾನ ಪ್ರಕ್ರಿಯೆ ಆರಂಭಿಸಲಾಗುವುದು ಎನ್ನುವ ಭರವಸೆಯನ್ನು ಸರ್ಕಾರ ನೀಡಿದೆ.