2023ರ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಪಕ್ಷಗಳು ಹಲವಾರು ಆಶ್ವಾಸನೆಗಳನ್ನು ನೀಡಿದ್ದವು. ಅದರ ಬೆನ್ನಲ್ಲೇ ಗೆದ್ದು ಬೀಗಿದ ಕಾಂಗ್ರೆಸ್ ಪಕ್ಷವು, ಆಡಳಿತವನ್ನು ಪ್ರಾರಂಭಿಸಿದ ಕೆಲವೇ ಕೆಲವು ದಿನಗಳಿಂದಲೇ ಚುನಾವಣಾ ಪ್ರಣಾಳಿಕೆಯಲ್ಲಿ ತಾನು ನೀಡಿದ ವಾಗ್ದಾನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಪ್ರತಿ ಮನೆಯ ಯಜಮಾನಿಗೆ ಮಾಸಿಕ ಹಣ ಎರಡು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಹೇಳಿತ್ತು.
ಅಂತೆಯೇ ಕುಟುಂಬವನ್ನು ನಿರ್ವಹಿಸಲು ಸಹಾಯವಾಗುವಂತೆ ಮಹಿಳೆಗೆ ಹಣ ನೀಡುವುದಾಗಿ ಅಧಿಕೃತ ಘೋಷಣೆಯನ್ನು ಸರ್ಕಾರವು ಮಾಡಿದೆ ಎಂಬ ವಿಚಾರವು ನಮಗೆಲ್ಲರಿಗೂ ತಿಳಿದಿದೆ. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವು ಆಗಸ್ಟ್ 15ರಿಂದ ಲಭ್ಯವಾಗಲಿದೆ ಎಂದು ಈಗಾಗಲೇ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಂಡು ಉತ್ತಮ ಆಹಾರ ಪೂರೈಕೆಯೊಂದಿಗೆ ಮಕ್ಕಳ ವಿದ್ಯಾಭ್ಯಾಸ ಮದುವೆ ಇನ್ನಿತರ ಖರ್ಚುಗಳನ್ನು ನಿಭಾಯಿಸಿಕೊಂಡು ಜೀವನ ಸಾಗಿಸುವುದು ಅನೇಕ ಕುಟುಂಬಗಳಿಗೆ ಕಷ್ಟವೇ ಸರಿ. ಕುಟುಂಬ ನಿರ್ವಹಣೆಗಾಗಿ ಮಹಿಳೆಯರಿಗೆ ಹಣವನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಸರ್ಕಾರವು ನೀಡಿದೆ. ಆರ್ಥಿಕ ಬೆಂಬಲವನ್ನು ನೀಡುವಲ್ಲಿ ಸಂಪುಟ ಸಭೆಯಲ್ಲಿ ಚರ್ಚೆಯಾಗಿದ್ದು ಅನುಮೋದನೆ ಕೂಡ ದೊರಕಿದೆ.
ಈಗಾಗಲೇ ಸರ್ಕಾರವು ಅಧಿಕೃತ ವೆಬ್ಸೈಟ್ನಲ್ಲಿ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಲು ನಮೂನೆಯನ್ನು ಬಿಡುಗಡೆ ಮಾಡಿದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 15 2023 ರಿಂದ ಪ್ರಾರಂಭವಾಗಲಿದ್ದು ಜುಲೈ 15 2019 ರವರೆಗೆ ಸಮಯಾವಕಾಶವಿದೆ. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಸಲ್ಲಿಸಿರುವ ಅರ್ಜಿಗಳ ಪರಿಶೀಲನ ಕಾರ್ಯವು ನಡೆಯಲಿದ್ದು, ಬಳಿಕ ಯೋಜನೆಯ ಫಲವು ಲಭ್ಯವಾಗಲಿದೆ.
ಗೃಹಲಕ್ಷ್ಮಿ ಯೋಜನೆಯ ಮೂಲಕ ಆರ್ಥಿಕ ನೆರವನ್ನು ಪಡೆಯಲು ಇಚ್ಚಿಸುವ ಮಹಿಳೆಯರು ಮೊದಲಿಗೆ ಅಧಿಕೃತ ವೆಬ್ಸೈಟ್ ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬೇಕು. ಜೊತೆಯಲ್ಲಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಬೇಕು. ಒಬ್ಬರಿಗಿಂತ ಹೆಚ್ಚು ಮಹಿಳೆಯರನ್ನು ಹೊಂದಿರುವ ಕುಟುಂಬದ ಯಜಮಾನಿಯನ್ನು ಸದಸ್ಯರೇ ತೀರ್ಮಾನಿಸಿಕೊಂಡಿರಬೇಕು.
ಎಪಿಎಲ್ ಅಥವಾ ಬಿಪಿಎಲ್ ಕಾರ್ಡನ್ನು ಕುಟುಂಬವು ಹೊಂದಿರಬೇಕು. ಆಧಾರ್ ಕಾರ್ಡ್, ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯ ಡೀಟೇಲ್ಸ್ ಅನ್ನು ಸರಿಯಾಗಿ ನೀಡಿರುವ ಕುಟುಂಬದ ಯಜಮಾನೀಯ ಖಾತೆಗೆ ನೇರವಾಗಿ ಸರ್ಕಾರದಿಂದ ಮಾಸಿಕ 2,000ಗಳಷ್ಟು ಹಣವು ಜಮಾ ಆಗಲಿದೆ. ಇದೊಂದು ಸಣ್ಣ ಕೆಲಸವನ್ನು ಮಾಡಿದರೆ ಮಾತ್ರ ಮಹಿಳೆಯರ ಖಾತೆಗೆ ಹಣ ಜಮಾ ಆಗುವುದಂತೆ. ಏನೆಂದು ಯೋಚಿಸುತ್ತಿದ್ದೀರಾ?
ಅದೇನೆಂದರೆ ಯೋಜನೆಯ ಸೌಲಭ್ಯವನ್ನು ಪಡೆಯಲು ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿರಬೇಕು.
ಲಿಂಕ್ ಮಾಡುವ ವಿಧಾನ :
• ಮೊದಲಿಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ : https://resident.uidai.gov.in/bank-mapper
• ಬಳಿಕ ಚೆಕ್ ಆಧಾರ್ ಬ್ಯಾಂಕ್ ಸ್ಟೇಟಸ್ ಎಂದು ಬರೆದಿರುವ ಪುಟ ಒಂದು ತೆರೆದುಕೊಳ್ಳುತ್ತದೆ. ಪುಟದ ಕೆಳಭಾಗದಲ್ಲಿ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ನೀಡಿರುವ ಕ್ಯಾಪ್ಚಾವನ್ನು ಬರೆಯಬೇಕು. ಬಳಿಕ ಸೆಂಡ್ ಒಟಿಪಿಯನ್ನು ಕ್ಲಿಕ್ ಮಾಡಬೇಕು. ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬಂದಿರುವ ಓಟಿಪಿಯನ್ನು ಪುಟದಲ್ಲಿ ಬರೆದು ಸಬ್ಮಿಟ್ ಮಾಡಬೇಕು.
• ಬಳಿಕ ತೆರೆದುಕೊಳ್ಳುವ ಪುಟದಲ್ಲಿ ಬ್ಯಾಂಕ್ ಸೀಡಿಂಗ್ ಸ್ಟೇಟಸ್ ಆಕ್ಟಿವ್ ಎಂದು ಬರೆದಿದ್ದು, ಖಾತೆಯನ್ನು ಹೊಂದಿರುವ ಬ್ಯಾಂಕಿನ ಹೆಸರು ಕೂಡ ಕೆಳಗೆ ಕಾಣಿಸುತ್ತದೆ. ಇದು ಆಧಾರ್ ಹಾಗೂ ಬ್ಯಾಂಕ್ ಖಾತೆಯು ಜೋಡಣೆ ಆಗಿದೆ ಎಂದರ್ಥ.
• ಇನ್ ಆಕ್ಟಿವ್ ಎಂದು ಬರೆದಿದ್ದರೆ ಬ್ಯಾಂಕ್ ಖಾತೆಗೆ ಭೇಟಿ ನೀಡಿ ಅಗತ್ಯ ಅರ್ಜಿಗಳನ್ನು ಭರ್ತಿ ಮಾಡಿ ಆಧಾರ್ ಕಾರ್ಡನ್ನು ಖಾತೆಗೆ ಲಿಂಕ್ ಮಾಡಿಸಿಕೊಳ್ಳಬೇಕು.
ನೆನಪಿನಲ್ಲಿಡಿ : ಗೃಹಲಕ್ಷ್ಮಿ ಯೋಜನೆಯಿಂದ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಕುಟುಂಬದ ಯಜಮಾನ ಬ್ಯಾಂಕ್ ಖಾತೆಯು ಆಧಾರ್ ಕಾರ್ಡ್ ನೊಂದಿಗೆ ಜೋಡಣೆಯಾಗಿರಬೇಕು. ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿರುವುದರಿಂದ ಮತ್ತೊಮ್ಮೆ ಖಚಿತಪಡಿಸಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಉತ್ತಮ.
*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*