10ನೇ ತರಗತಿ ವಿದ್ಯಾಭ್ಯಾಸ ಮುಗಿಸಿ ದೂರದ ಊರುಗಳಲ್ಲಿ PUC ಮತ್ತು PUC ಸಮನಾಂತರ ಕೋರ್ಸ್ ಗಳಿಗೆ ದಾಖಲಾಗಿರುವ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ನೀಡಲಾಗುತ್ತಿದೆ. 2024-25ನೇ ಶೈಕ್ಷಣಿಕ ವರ್ಷಗಳು ಆರಂಭವಾಗಿದ್ದು, ಈ ವರ್ಷ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆಯನ್ನು ಹೊರಡಿಸಿ ಮಾಹಿತಿ ತಿಳಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಅಂದರೆ PUC ಮತ್ತು PUC ಸಮನಾಂತರ ಕೋರ್ಸ್ ಗಳಿಗೆ 2024-2025ನೇ ಸಾಲಿನಲ್ಲಿ ಹೊಸದಾಗಿ ಸೇರ್ಪಡೆಯಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಪ್ರವರ್ಗ-1, 2A,2B,3A,3B ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿ ಇರುವ ಪ್ರಮುಖ ಅಂಶಗಳ ಮತ್ತು ನಿಬಂಧನೆಗಳ ಬಗ್ಗೆ ತಿಳಿಸುವ ಪ್ರಯತ್ನವನ್ನು ಈ ಅಂಕಣದಲ್ಲಿ ಮಾಡುತ್ತಿದ್ದೇವೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಇರುವ ಪ್ರಮುಖ ನಿರ್ಬಂಧನೆಗಳು:-
● ಎಸ್.ಸಿ & ಎಸ್.ಟಿ, ಪವರ್ಗ-1 ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು 2.50 ಲಕ್ಷ ಒಳಗಿರಬೇಕು.
● ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ವರ್ಗಗಳಿಗೆ ಸೇರಿದ ಪೋಷಕರ ಆದಾಯವು 1 ಲಕ್ಷದೊಳಗಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲೆಗಳು:-
● ವಿದ್ಯಾರ್ಥಿಯ ಆಧಾರ್ ಕಾರ್ಡ್
● SSP ಸ್ಟೂಡೆಂಟ್ ಐಡಿ
● SSLC ಅಕಪಟ್ಟಿ
● ಹಿಂದಿನ ವರ್ಷದ ಅಂಕಪಟ್ಟಿ
● ಜಾತಿ ಪ್ರಮಾಣ ಪತ್ರ
● ಆದಾಯ ಪ್ರಮಾಣಪತ್ರ
● ವರ್ಗಾವಣೆ ಪ್ರಮಾಣಪತ್ರ
● ಪಾಸ್ಪೋರ್ಟ್ ಗಾತ್ರದ ಫೋಟೋ
● ಮೊಬೈಲ್ ನಂಬರ್
● ಕಾಲೇಜ್ ಸ್ಟಡಿ ಸರ್ಟಿಫಿಕೇಟ್
ಅರ್ಜಿ ಸಲ್ಲಿಸುವ ವಿಧಾನ:-
● ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು SHP ತಂತ್ರಾಂಶದ ಮೂಲಕ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
● ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ.
● SHP ಪೋರ್ಟಲ್ ನಲ್ಲಿ ಮೇಲೆ ಕಾಣಿಸುತ್ತಿರುವ HOSTEL APPLUCATION POSTMATRIC ಆಪ್ಷನ್ ಮೇಲೆ ಕ್ಲಿಕ್ ಮಾಡಿ.
● ಇಲ್ಲಿ ನಿಮ್ಮ SSP ಐಡಿಯನ್ನು ನಮೂದಿಸಿ, ಗೆಟ್ ಡೇಟಾ ಮೇಲೆ ಕ್ಲಿಕ್ ಮಾಡಿ
● ನಂತರ ನಿಮ್ಮ ಶೈಕ್ಷಣಿಕ ವರ್ಷದ ಮಾಹಿತಿ ದೊರೆಯುತ್ತದೆ ಮತ್ತು ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯವಿರುವ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
● ಅರ್ಜಿ ಸಲ್ಲಿಸಿದ ನಂತರ ಭವಿಷ್ಯದ ಬಳಕೆಗಾಗಿ ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಿ.
● ಇಲಾಖೆಯು ಪರಿಶೀಲನೆ ನಡೆಸಿ ಆಯ್ಕೆಯಾದ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡುತ್ತಾರೆ.
● ನೀವು ಅರ್ಹರಿದ್ದು ಪ್ರವೇಶಾತಿ ದೊರೆಯದೆ ಇದ್ದರೆ ವಿದ್ಯಾಸಿರಿ ಯೋಜನೆಯಡಿ ಮಾಸಿಕವಾಗಿ 1500 ರುಪಾಯಿಯಂತೆ 10 ತಿಂಗಳಿಗೆ 15,000ರೂಗಳು ನಿಮ್ಮ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ.
ಪ್ರಮುಖ ದಿನಾಂಕಗಳು:-
● ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 16.06.2024.
● ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16.07.2024.
● ಹೊಸ ಅರ್ಜಿಗಳನ್ನು ತಾಲೂಕು ಕಲ್ಯಾಣ ಅಧಿಕಾರಿಗಳು ಪರಿಶೀಲನೆ ಮಾಡಲು ನಿಗದಿ ಪಡಿಸಿದ ದಿನಾಂಕ – 19.07.2024.
● ಕೌನ್ಸಿಲಿಂಗ್ ಮೂಲಕ ಆಯ್ಕೆ ಆದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಪ್ರಕಟಣೆ ದಿನಾಂಕ – 21.07.2024.
● ಆಯ್ಕೆ ಆದ ವಿದ್ಯಾರ್ಥಿಗಳು ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಪಡೆಯಲು ನಿಗದಿಪಡಿಸಿದ ಅಂತಿಮ ದಿನಾಂಕ – 25.07.2024.