* ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನ ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು.
* ಮನೆಯ ಮುಖ್ಯದ್ವಾರದ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ. ಅಷ್ಟು ಮಾತ್ರವಲ್ಲದೆ ಬೇರೆ ಯಾರೂ ಸಹ ಹೊಸ್ತಿಲಿನ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ.
* ಸಂಜೆ ದೀಪ ಬೆಳಗಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ. ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ ಹಾಕಬೇಡಿ. ಒಂದು ಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ ಸೂರ್ಯೋದಯದ ನಂತರ ಹೊರಗೆ ಹಾಕಿ.
* ಪೊರಕೆಯ ತುದಿಯ ಭಾಗ (ಕಸ ಗುಡಿಸುವ ಭಾಗ) ವನ್ನು ಮೇಲೆ ಮಾಡಿ ನಿಲ್ಲಿಸಬೇಡಿ ಅದು ಸ್ಮಶಾನ ಮನೆ ಸೂಚಕವಾಗಿದೆ ಹಾಗೆ ಇಡುವುದು ಸ.ತ್ತವರ ಮನೆಯಲ್ಲಿ ಮಾತ್ರ.
* ಮೊರ, ಪೊರಕೆಗಳನ್ನು ಕಾಲುಗಳಿಂದ ಒದೆಯಬೇಡಿ ಅಥವಾ ತುಳಿ ಯಬೇಡಿ ಹಾಗೇನಾದರೂ ನಿಮ್ಮ ಕಾಲು ಅಕಸ್ಮಾತ್ತಾಗಿ ತಗುಲಿದರೂ ಪೊರಕೆಗೆ ನಮಸ್ಕರಿಸಿ.
* ಚಪ್ಪಲಿಗಳನ್ನು ಮನೆಯ ಹೊಸ್ತಿಲು, ಮುಖ್ಯದ್ವಾರದ ಎದುರಿಗೆ, ಅಕ್ಕಪಕ್ಕ ಬಿಡಬೇಡಿ, ಸ್ವಲ್ಪ ದೂರದಲ್ಲಿಯೇ ಬಿಟ್ಟರೆ ಒಳ್ಳೆಯದು ರಂಗೋಲಿ ಹಾಕದೆ ಹಾಗೆ ಬಾಗಿಲ ಮುಂಭಾಗವನ್ನು ಸಾರಿಸಿ ಇಡುವುದು ಒಳ್ಳೆಯದಲ್ಲ.
ಈ ಸುದ್ದಿ ಓದಿ:- ದೇವರಲ್ಲಿ ಹರಿಕೆ ಹೊತ್ತು ನೀವು ಮರೆತಿರುವಿರೆ.! ಹರಿಕೆ ತೀರಿಸಲಾಗದೆ ಕಷ್ಟಗಳು ಎದುರಾಗುತ್ತಿದೆಯೇ.? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ
* ಯಾವುದಾದರೂ ಒಂದು ಪುಟ್ಟ ರಂಗೋಲಿಯನ್ನಾದರು ಹಾಕಿ.
* ಮನೆಯ ಗೋಡೆಯ ಮೇಲೆ, ದೇವರ ಮನೆ ಮುಂತಾದ ಸ್ಥಳಗಳಲ್ಲಿ ಗೋಡೆಗಳ ಮೇಲೆ ಶಾಯಿ ಅಥವಾ ಕರಿ ಬಣ್ಣ ಇತ್ಯಾದಿಗಳಿಂದ ವಿಕಾರ ಆಕೃತಿಗಳನ್ನು ಬರೆಯಬೇಡಿ.
* ನಡೆಯುವಾಗ ನಿಮ್ಮ ಪಾದವನ್ನು ನೆಲಕ್ಕೆ ಸವರಿಕೊಂಡು ಓಡಾಡ ಬೇಡಿ. ಕಾಲಿನ ಪಾದವನ್ನು ಎತ್ತಿ ಇಟ್ಟು ನಡೆಯಬೇಕು ಸಾಧ್ಯವಾದಷ್ಟು ಶಬ್ದ ಕಡಿಮೆ ಇರಲಿ. ಹೆಣ್ಣುಮಕ್ಕಳು ಕಾಲಿಗೆ ಕಾಲ್ಲೆಜ್ಜೆಯನ್ನು ಧರಿಸುವುದು ಒಳ್ಳೆಯದು.
* ಮಂಗಳವಾರ, ಶುಕ್ರವಾರದಂದು ಯಾರನ್ನೂ ಸಹ ಅವಾಚ್ಯ ಶಬ್ದ ಗಳಿಂದ ಬಯ್ಯಬೇಡಿ, ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳನ್ನು ಆ ದಿನಗಳು ಅವಾಚ್ಯ ಶಬ್ದಗಳಿಂದ ಬಯ್ಯಲುಬಾರದು, ಅವರ ಮನಸ್ಸನ್ನು ಸಹ ನೋಯಿಸಬಾರದು.
* ಹರಿದು ಹೋದ ಬಟ್ಟೆಗಳನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ. ಒಂದು ವೇಳೆ ನೀವೇನಾದರೂ ಧರಿಸಿದರೆ ಮಾಟ ಮಂತ್ರ ದೃಷ್ಟಿಗಳ, ಪ್ರಯೋಗ ಮಾಡಿಸಿದ್ದರೆ ಅವುಗಳ ಮೇಲೆ ಪರಿಣಾಮ ಬೇಗ ಬೀಳುತ್ತದೆ
* ಕೈ ಮತ್ತು ಕಾಲುಗಳ ಉಗುರುಗಳನ್ನು ವಿಪರೀತ ಬೆಳೆಸಬೇಡಿ. ಅದು ದಾರಿದ್ರದ ಸಂಕೇತವಾಗಿದೆ.
ಈ ಸುದ್ದಿ ಓದಿ:- ಅಕ್ಕಿಯಲ್ಲಿ ಹುಳ ಆಗಿದ್ಯಾ? ಹೀಗೆ ಮಾಡಿ ಎರಡು ವರ್ಷ ಆದ್ರೂ ಅಕ್ಕಿ ಏನೂ ಆಗಲ್ಲ.!
* ಉಗುರುಗಳನ್ನು ಸಂಜೆ ಮತ್ತು ರಾತ್ರಿಯ ಸಮಯದಲ್ಲಿ ಕತ್ತರಿಸಬೇಡಿ ಹಾಗೆ ಶುಕ್ರವಾರ, ಮಂಗಳವಾರ, ಶನಿವಾರದ ದಿನ ಉಗುರುಗಳನ್ನು ಕತ್ತರಿಸಬಾರದು. ಕತ್ತರಿಸಿದ ಉಗುರುಗಳನ್ನು ಸಹ ಮನೆಯಲ್ಲಿ ಎಲ್ಲಂದರಲ್ಲಿ ಎಸೆಯಬಾರದು.
* ಹಾಲನ್ನು ಚೆಲ್ಲಿದ್ದರೆ ತುಳಿದುಕೊಂಡು ಓಡಾಡಬೇಡಿ ಒಂದು ವಸ್ತ್ರವನ್ನು ತೆಗೆದುಕೊಂಡು ಕೈಗಳಿಂದ ಸ್ವಚ್ಛಗೊಳಿಸಬೇಕು.
* ಮನೆಯಲ್ಲಿ ಹೆಣ್ಣುಮಕ್ಕಳು ಕೆದರಿದ ಕೂದಲನ್ನು ಬಿಟ್ಟುಕೊಂಡು ಓಡಾಡಬಾರದು, ಕುಂಕುಮವಿಲ್ಲದ ಹಣೆ, ಕೆದರಿದ ಕೂದಲು ಅರಿಶಿನ ಹಚ್ಚದ ಕೈ ಕಾಲುಗಳು ಮಹಿಳೆಯರಿಗೆ ಅಶುಭದ ಸಂಕೇತವಾಗಿವೆ.
* ಮುಸ್ಸಂಜೆ ಮತ್ತು ಸೂರ್ಯಾಸ್ತದ ಬಳಿಕ ತಲೆಯ ಕೂದಲನ್ನು ಬಾಚಬಾರದು.
* ಹಾಸಿಗೆ, ಸೋಫಾ, ಮಂಚದ ಮೇಲೆ ಕುಳಿತು ದ್ಯಾನ ಪೂಜೆಗಳನ್ನು ಮಾಡಬೇಡಿ, ಯಾವ ಫಲವನ್ನೂ ನೀಡುವುದಿಲ್ಲ.
ಈ ಸುದ್ದಿ ಓದಿ:- ನವಿಲುಗರಿಯನ್ನು ಮನೆಯಲ್ಲಿ ಇಲ್ಲಿಟ್ಟರೆ ಹಣಕ್ಕೆ ಕೊರತೆ ಬರಲ್ಲ..
* ಸೂರ್ಯೋದಯಕ್ಕೆ ಮುಂಚಿತವಾಗಿಯೇ ಹಾಸಿಗೆಯಿಂದ ಏಳುವ ಅಭ್ಯಾಸ ಮಾಡಿಕೊಳ್ಳಿ ಮುಸ್ಸಂಜೆ ವೇಳೆ ಸೂರ್ಯೋದಯದ ಸಮಯದಲ್ಲಿ ಮಲಗಬೇಡಿ ಹಾಗೆ ಮಾಡಿದರೆ ದರಿದ್ರಲಕ್ಷ್ಮೀ ಮನೆಯಲ್ಲಿ ತಾಂಡವವಾಡುತ್ತಾಳೆ.
* ಸುಮಂಗಲಿಯರ ಬೈತಲೆಯಲ್ಲಿ ಯಾವಾಗಲ ಕುಂಕುಮ ಇರದೇ ಇರಬಾರದು.
* ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು.
* ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣೀರು ಹಾಕಬಾರದು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.