.
ರಾಜ್ಯದ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿಸುದ್ದಿ ಸರ್ಕಾರ ಕಡೆಯಿಂದ ಮತ್ತೊಂದು ನೇಮಕಾತಿ ನಡೆಯುತ್ತಿದ್ದು, ಈ ಬಾರಿ ಹುದ್ದೆಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಹೆಚ್ಚಿನ ಜನರಿಗೆ ಕೆಲಸ ಸಿಗುವ ಸಾಧ್ಯತೆ ಇದೆ. ದೇಶದಲ್ಲೆಡೆ ನಿರುದ್ಯೋಗ ಹೆಚ್ಚಾಗುತ್ತಿದೆ, ಪದವಿ ಪಡೆದಿದ್ದರು ಕೂಡ ಅರ್ಹತೆಗೆ ತಕ್ಕ ಉದ್ಯೋಗ ಇಲ್ಲದೆ ಯುವಜನತೆ ಪರದಾಡುತ್ತಿದ್ದಾರೆ. ಜೊತೆಗೆ ಕೊರೋನಾ ಅಂತಹ ಮಹಾಮಾರಿ ಕಾಡಿದ ಮೇಲೆ ಇತ್ತೀಚೆಗೆ ಜನರು ಸರ್ಕಾರಿ ಹುದ್ದೆಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.
ತಮಗೆ ಹಾಗೂ ಕುಟುಂಬಕ್ಕೆ ಭದ್ರತೆ ಎನ್ನುವ ಕಾರಣಕ್ಕಾಗಿ ಸರ್ಕಾರಿ ಹುದ್ದೆ ಹೊಂದಬೇಕು ಎಂದು ಪ್ರಯತ್ನ ಪಡುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಸಕಾಲ. ಕೇಂದ್ರ ಸರ್ಕಾರದ ವತಿಯಿಂದ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.
ಈ ಅಂಕಣದಲ್ಲಿ ಸಹ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಹುದ್ದೆಗಳಿಗೆ ಸಂಬಂಧಪಟ್ಟ ಹಾಗೆ ಅಧಿಸೂಚನೆಯಲ್ಲಿ ಇರುವ ಪ್ರಮುಖ ವಿಷಯಗಳಾದ ಹುದ್ದೆಗಳ ಸಂಖ್ಯೆ, ಹುದ್ದೆಗಳ ವಿವರ, ವೇತನ ಶ್ರೇಣಿ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ವಯೋಮಾನ ಸಡಲಿಕೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಜಿ ಶುಲ್ಕ, ಅರ್ಜಿ ಶುಲ್ಕ ಪಾವತಿಸುವ ರೀತಿ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ ಇವುಗಳ ಬಗ್ಗೆ ತಿಳಿಸಿಕೊಡಲಾಗಿದೆ.
ಹೆಚ್ಚಿನ ವಿವರ ಬೇಕಾದಲ್ಲಿ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು, ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ತಿಳಿದುಕೊಳ್ಳಬಹುದು.
ಸಂಸ್ಥೆ:- ಇನ್ಸ್ಟಿಟ್ಯೂಟ್ ಆಫ್ ಕಿಡ್ನಿ ಡಿಸೀಸ್ ಅಂಡ್ ರಿಸರ್ಚ್ ಸೆಂಟರ್.
ಹುದ್ದೆಗಳ ಸಂಖ್ಯೆ:- 1156
ಉದ್ಯೋಗ ಸ್ಥಳ:- ಭಾರತದಾದ್ಯಂತ
ಹುದ್ದೆಗಳ ವಿವರ:-
● ಆಡಳಿತ ಸಹಾಯಕ
● ಜೂನಿಯರ್ ಕ್ಲರ್ಕ್
● ಸೀನಿಯರ್ ಕ್ಲರ್ಕ್
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 35,400 ರಿಂದ 1,12,400 ವೇತನ ಸಿಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ತತ್ಸಮಾನವಾದ ಪರೀಕ್ಷೆ ಪಾಸ್ ಆಗಿರಬೇಕು.
ವಯಸ್ಸಿನ ಮಿತಿ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಸರಿಯಾಗಿ ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು. ಗರಿಷ್ಠ 40 ವರ್ಷಗಳನ್ನು ಮೀರಿದಬಾರದು.
ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು
ಅರ್ಜಿ ಶುಲ್ಕ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 1000ರೂ. ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ.
ಆಯ್ಕೆ ವಿಧಾನ:-
● ಸಂದರ್ಶನ
● ದಾಖಲಾತಿ ಪರಿಶೀಲನೆ
ಅರ್ಜಿ ಸಲ್ಲಿಸುವ ವಿಧಾನ:-
● ಅಧಿಸೂಚನೆಯನ್ನು ಓದಿ ಆ ಪ್ರಕಾರವಾಗಿ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಾನ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು.
● ಸಂಸ್ಥೆಯ ಅಧಿಕೃತ ವೆಬ್ ಸೈಟ್ ಗೆ ಹೋಗಿ ಅರ್ಜಿ ಫಾರಂ ಭರ್ತಿ ಮಾಡಿ ಕೇಳಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ಇನ್ನಿತರ ಪ್ರಮುಖ ದಾಖಲೆಗಳು
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 15 ಏಪ್ರಿಲ್, 2023.
● ಅರ್ಜಿ ಸಲ್ಲಿಸಲು ಕೊನೆ ದಿನಾಂಕ – 16 ಮೇ, 2023.