ನಮ್ಮಲ್ಲಿರುವ ಅಗತ್ಯ ದಾಖಲೆಗಳ ಪೈಕಿ ರೇಷನ್ ಕಾರ್ಡ್ ಕೂಡಾ ಒಂದಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಮುಖ್ಯವಾಗಿ ಇತ್ತೀಚೆಗೆ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ರೇಷನ್ ಕಾರ್ಡ್ ಅತೀ ಮುಖ್ಯವಾಗಿದೆ. ರಾಜ್ಯದಲ್ಲಿ ಪ್ರಸ್ತುತ ಪ್ರಮುಖವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ. ಅದರಲ್ಲಿ ಕೆಲವು ಯೋಜನೆಗಳಿಗೆ ರೇಷನ್ ಕಾರ್ಡ್ ಮುಖ್ಯವಾಗಿದೆ.
ಅನ್ನದಾತ ಯೋಜನೆಯಡಿಯಲ್ಲಿ ಹತ್ತು ಕೆಜಿ ಅಕ್ಕಿ ಒದಗಿಸುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಈಗ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಗಳಂತೆ ಐದು ಕೆಜಿ ಅಕ್ಕಿದೆ ಒಟ್ಟು 170 ರೂಪಾಯಿಗಳನ್ನು ಖಾತೆಗೆ ವರ್ಗಾಯಿಸುತ್ತದೆ. ಇದನ್ನು ಹೊರತುಪಡಿಸಿ ಗೃಹಲಕ್ಷ್ಮೀ ಯೋಜನೆಗೂ ಕೂಡಾ ರೇಷನ್ ಕಾರ್ಡ್ ಮುಖ್ಯವಾಗುತ್ತದೆ.
ಗೃಹ ಲಕ್ಷ್ಮೀ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿಯನ್ನು ನೀಡಲಾಗುತ್ತದೆ. ಮಹಿಳೆಯರ ಖಾತೆಗೆ ಅದನ್ನು ಜಮೆ ಮಾಡಲಾಗುತ್ತದೆ. ಆದರೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ನೀಡುವ ಅಂತ್ಯೋದಯ, ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಾಜಮಾನಿ ಎಂದು ಮಹಿಳೆಯನ್ನು ಗುರುತಿಸಲಾಗಿದ್ದರೆ ಮಾತ್ರ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿದ್ದಾರೆ.
ರೇಷನ್ ಕಾರ್ಡ್‌ನಲ್ಲಿ ಪುರುಷರು ಮನೆಯ ಯಜಮಾನರು ಎಂದು ಇದೆಯೇ? ಅದನ್ನು ಹೇಗೆ ಬದಲಾವಣೆ ಮಾಡುವುದು ಎಂದು ನಾವಿಲ್ಲಿ ವಿವರಿಸಿದ್ದೇವೆ. ಈ ಬಗ್ಗೆ ಸಂಪೂರ್ಣವಾಗಿ ಇಲ್ಲಿ ಓದಿ ತಿಳಿದುಕೊಳ್ಳಿ…
ರೇಷನ್ ಕಾರ್ಡ್‌ನಲ್ಲಿ ಯಜಮಾನರ ಹೆಸರು ಬದಲಾವಣೆ ಹೇಗೆ?
* ಮೊದಲಿಗೆ ಸಮೀಪದ ಪಡಿತರ ಚೀಟಿ ಸೇವಾಕೇಂದ್ರಗಳಿಗೆ ಭೇಟಿ ನೀಡಿರಿ.
* ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಕ್ಕೆ ಅರ್ಜಿಯನ್ನು ಭರ್ತಿ ಮಾಡಿ
* ಅರ್ಜಿಯೊಂದಿಗೆ ಅಗತ್ಯವಿರುವ ದಾಖಲೆಗಳನ್ನು ಕೂಡಾ ಸಲ್ಲಿಸಿ.
* ಬಯೋಮೆಟ್ರಿಕ್ ದೃಡೀಕರಣದ ಮೂಲಕ ದಾಖಲೆಗಳನ್ನು ದೃಢೀಕರಿಸಿ
* ಪಡಿತರ ಸೇವಾ ಕೇಂದ್ರದಲ್ಲಿ ಎಲ್ಲ ಮಾಹಿತಿಯನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಲಾಗುತ್ತದೆ.
* ಅಲ್ಲಿ ನೀಡಲಾಗುವ ಸ್ವೀಕೃತಿಯನ್ನು ನಿಮ್ಮ ಬಳಿ ಇಟ್ಟುಕೊಳ್ಳಿರಿ
* ಅದಾದ ಬಳಿಕ ಆಹಾರ ಕಚೇರಿಯಲ್ಲಿ ನಿಮಗೆ ಎಸ್‌ಎಂಎಸ್ ಬರಲಿದೆ
* ಎಸ್‌ಎಂಎಸ್ ಬಂದ ಬಳಿಕ ನಿಮ್ಮಲ್ಲಿರುವ ಸ್ವೀಕೃತಿ ಪತ್ರ ಬಳಸಿಕೊಂಡು ನಿಮ್ಮ ಪಡಿತರ ಚೀಟಿಯನ್ನು ಪ್ರಿಂಟ್ ತೆಗೆದುಕೊಳ್ಳಬಹುದು.
ಆನ್‌ಲೈನ್‌ನಲ್ಲಿ ರೇಷನ್ ಕಾರ್ಡ್ ಬದಲಾಯಿಸುವುದು ಹೇಗೆ?
* https://ahara.kar.nic.in/ ಗೆ ಲಾಗ್ ಇನ್ ಆಗಿ
* ಮೇನ್ ಪೇಜ್‌ನಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ಅದಾದ ಬಳಿಕ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕಾಣಿಸಲಿದೆ, ಅಲ್ಲಿ ಕ್ಲಿಕ್ ಮಾಡಿರಿ
* ಈಗ ಹೊಸ ಪೇಜ್ ತೆರೆಯಲಿದೆ.
* ನಿಮ್ಮ ಜಿಲ್ಲೆಗೆ ಅನುಗುಣವಾಗಿ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಹೊಸ ಸೇರ್ಪಡೆ/ ತಿದ್ದುಪಡಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
* ತಿದ್ದುಪಡಿಗೆ ಬೇಕಾದ ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿರಿ
* ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ
* ಈ ನಂಬರ್ ಮೂಲಕ ನಿಮ್ಮ ಅರ್ಜಿಯ ಸ್ಟೇಟಸ್ ಅನ್ನು ಟ್ರ್ಯಾಕ್ ಮಾಡಲು ಸಾಧ್ಯವಾಗಲಿದೆ.
ಬೇಕಾದ ದಾಖಲೆಗಳು ಯಾವುದು?
ರೇಷನ್ ಕಾರ್ಡ್‌ನಲ್ಲಿ ಕುಟುಂಬದ ಮುಖ್ಯಸ್ಥರ ಹೆಸರುನ್ನು ಬದಲಾವಣೆ ಮಾಡಬೇಕಾದರೆ ಕುಟುಂಬದ ಮುಖ್ಯಸ್ಥ ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣಪತ್ರ, ಪಡಿತರ ಚೀಟಿ, ಅರ್ಜಿದಾರರ ವಿಳಾಸದ ಪುರಾವೆಯಾಗಿ ಆಧಾರ್ ಕಾರ್ಡ್ ಪ್ರತಿ ಅಥವಾ ಇತರೆ ದಾಖಲೆ, ಅರ್ಜಿದಾರರ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್ ಪ್ರತಿ ಅಥವಾ ಇತರೆ ದಾಖಲೆಗಳು, ಹೊಸ ಕುಟುಂಬ ಸದಸ್ಯರ ಪಾಸ್‌ಪೋರ್ಟ್ ಗಾತ್ರದ ಫೋಟೋ, ಆಧಾರ್ ಕಾರ್ಡ್ ಬೇಕಾಗುತ್ತದೆ.
ಇನ್ನು ಪ್ರಸ್ತುತ ರೇಷನ್ ಕಾರ್ಡ್‌ನ ಎಲ್ಲಾ ಅಪ್‌ಡೇಟ್‌ಗಳನ್ನು ಸರ್ಕಾರವು ತಡೆಹಿಡಿದಿದೆ. ಆದ್ದರಿಂದಾಗಿ, ನೀವು ಈಗ ಅಪ್‌ಡೇಟ್ ಮಾಡಲು ಸಾಧ್ಯವಾಗುವುದಿಲ್ಲ. ಮತ್ತೆ ಅಪ್‌ಡೇಟ್‌ಗೆ ಸರ್ಕಾರ ಅವಕಾಶ ನೀಡಿದಾಗ ನೀವು ಈ ಮೇಲಿನ ಹಂತಗಳನ್ನು ಪಾಲಿಸಿ ಅಪ್‌ಡೇಟ್ ಮಾಡಿಕೊಳ್ಳಬಹುದು, ಯಜಮಾನರ ಹೆಸರನ್ನು ಬದಲಾವಣೆ ಮಾಡಿಕೊಳ್ಳಬಹುದಾಗಿದೆ.