ಕಾಂಗ್ರೆಸ್‌ನ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi scheme)ಯ ಹಣ ಖಾತೆಗೆ ಬರುವ ದಿನಾಂಕದ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ 1.30 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿದ ಬಳಿಕ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡುತ್ತಿದ್ದು, ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು. ಈ ವೇಳೆ, ʻಜನರಿಗೆ ನಾವು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.
ದೇವರ ಫೋಟೋದಿಂದ ಪದೇ ಪದೇ ಹೂ ಬೀಳುತ್ತಿದ್ದರೆ ಅದರ ಅರ್ಥ ಏನು ಗೊತ್ತಾ.?
ರಾಜ್ಯ ಸರ್ಕಾರ ಬಡತನ ನಿರ್ಮೂಲನೆ ಕೆಲಸ ಮಾಡುತ್ತಿದೆ. ನಾವು ಈಗಾಗಲೇ ನೀಡಿರುವ ಆಶ್ವಾಸನೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಮಹಿಳೆಯರಿಗೆ 2,000 ರೂ. ಆರ್ಥಿಕ ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುತ್ತಿದ್ದು, ಅಂದೇ ಮಹಿಳೆಯರ ಖಾತೆಗೆ 2,000 ರೂ. ಜಮೆ ಆಗಲಿದೆ ಎಂದು ತಿಳಿಸಿದ್ದಾರೆ.
ಈ ಮಹಿಳೆಯರಿಗೆ ಹಣ ಸಿಗೋದಿಲ್ಲ
ಇನ್ನೇನು ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂಬ ಖುಷಿಯ ಸಮಯದಲ್ಲಿ ಸರ್ಕಾರವು ಇನ್ನೊಂದು ನಿಯಮವನ್ನು ಜಾರಿಗೆ ತಂದು ಬಿಗ್ ಶಾಕ್ ನೀಡಿದೆ. ಅದೇನೆಂದರೆ, ಬಿಪಿಎಲ್ ಕುಟುಂಬದ ಯಜಮಾನಿಗೆ ಮಾತ್ರ 2000 ರೂ. ಅಂತ ಹೇಳಲಾಗಿದ್ದು, 5 ಎಕರೆ ಮೀರಿದ ಒಣ ಭೂಮಿ ಹೊಂದಿರುವ ಜನರಿಗೆ 2000 ರೂ. ಬೇಡ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೆ, ನಾಲ್ಕು ಚಕ್ರಗಳ ವಾಹನ ಹೊಂದಿದ ಕುಟುಂಬದವರಿಗೆ ಹಣವನ್ನು ನೀಡಲಾಗದು ಎನ್ನುತ್ತಿದ್ದಾರೆ.
ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಯಾರಿಗೂ ಬೇಡ ಎಂದು ಹೇಳಲಾಗಿದೆ. ಸರ್ಕಾರಿ ಉದ್ಯೋಗ ಮತ್ತು ಪೆನ್ಷನ್ ಪಡೆಯುವವರೆಗೂ ಬೇಡ ಎಂದು ಹೇಳಲಾಗಿದೆ. ಸರ್ಕಾರ ಇನ್ಕಮ್ ಟ್ಯಾಕ್ಸ್ ಪಾವತಿದಾರರ ಕುಟುಂಬಕ್ಕೂ ಹಣ ದೊರೆಯುವುದಿಲ್ಲ. ಜಿಎಸ್‌ಟಿ ರಿಟರ್ನ್ ಪಾವತಿಸುವ ಮಹಿಳೆಯರಿಗೂ ನೀಡಬಾರದು. ಪ್ರೊಫೆಷನಲ್ ಟ್ಯಾಕ್ಸ್ ಪಾವತಿದಾರರಿಗೂ ಕೊಡಬಾರದು ಎಂದು ಸರ್ಕಾರ ತಿಳಿಸಿದೆ ಎಂದು ಸುದ್ದಿಗಳು ಹೇಳುತ್ತಿವೆ. ಅದೇನೆ ಇದ್ದರೂ ಒಂದು ಒಂದು ಬಾರಿ ಹಣ ಜಮಾ ಆದ ನಂತರ ಯಾರ್ಯಾರಿಗೆ ಬಂದಿದೆ ಎಂದು ತಿಳಿಯಿತ್ತದೆ.
ಈ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ?
ಹಲವಾರು ಜನರಿಗೆ ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹಣ ಬಂದಿದೆ. ಬಿಪಿಎಲ್ ಕಾರ್ಡ್ ಹೊಂದಿದ ಮನೆಯ ಯಜಮಾನಿಯ ಖಾತೆಗೆ ಯೋಜನೆಯ ಹಣ ಬಂದಿರುತ್ತದೆ. ಆದ್ದರಿಂದ, ಅದೇ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೂಡ ಬರುತ್ತದೆ. ಗೃಹಲಕ್ಷ್ಮಿ ಯೋಜನೆಯ ಅಧಿಕೃತ ಪ್ರಕಟಣೆಯ ಪ್ರಕಾರ, ರೇಷನ್ ಕಾರ್ಡಿನಲ್ಲಿ ಇರುವ ಮನೆಯ ಯಜಮಾನಿಯ ಖಾತೆಗೆ ಹಣ ಜಮಾ ಆಗುತ್ತದೆ.
ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ. ಒಂದು ವೇಳೆ ನೀವೇನಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಬೇರೆ ಖಾತೆಯ ಅಕೌಂಟ್ ನಂಬರ್ ಅನ್ನು ಕೊಟ್ಟಿದ್ದರೆ ಆ ಬ್ಯಾಂಕ್ ಖಾತೆಗೆ ಹಣ ಜಮಾವಾಗಲಿದೆ. ನಿಮಗೇನಾದರೂ ಇನ್ನೂ ಇದರ ಬಗ್ಗೆ ಸಂಶಯವಿದ್ದಲ್ಲಿ, ಯಾವ ಖಾತೆಗೆ ಹಣ ಜಮಾ ಆಗುತ್ತದೆ ಎಂಬುವುದನ್ನು ನೀವೇ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಅದಕ್ಕಾಗಿ ಕೆಳಗಿನ ಹಂತಗಳನ್ನು ಅನುಸರಿಸಿ.
ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವ ಖಾತೆಯನ್ನು ಚೆಕ್ ಮಾಡುವ ವಿಧಾನ ಹೀಗಿದೆ
ಹಂತ 1: ಮೊದಲನೆಯದಾಗಿ ಆಹಾರ ಮತ್ತು ನಾಗರಿಕ ಸರಜರಾಜು ಇಲಾಖೆಯ ಜಾಲತಾಣಕ್ಕೆ ತೆರಳಲು ಇಲ್ಲಿ ಕ್ಲಿಕ್ ಮಾಡಿ
https://ahara.kar.nic.in/Home/Eservices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ. ಇಲ್ಲಿ
ಮುಖ ಪುಟ ತೆಗೆಯುತ್ತದೆ ಅದರಲ್ಲಿ ಈ ಸ್ಟೇಟಸ್ ಎಂಬ ಆಯ್ಕೆಯನ್ನು ಒತ್ತಿ, ನಂತರ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 2: ನಂತರ ನಿಮ್ಮ ಜಿಲ್ಲೆಯ ಮೇಲಿನ ಲಿಂಕನ್ನು ಕ್ಲಿಕ್ ಮಾಡಿ.
ಹಂತ 3 : ನಂತರ ಕೆಳಗಿನ ಭಾಗದಲ್ಲಿರುವ ಡಿಬಿಟಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ.
ಹಂತ 4: ಮುಂದುವರೆದು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ. ನಂತರ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದರೆ, 2000 ಹಣ ಜಮಾ ಆಗಿದೆ ಎಂಬುದರ ಮಾಹಿತಿಯನ್ನು ನೀವು ನೋಡಬಹುದು.
ಹೀಗೆ ನೀವು ಗೃಹಲಕ್ಷ್ಮಿ ಯೋಜನೆಯಡಿಯಲ್ಲಿನ ಹಣವು ನಿಮಗೆ ಜಮಾ ಆಗಿದೆಯೇ ಅಥವಾ ಅದರ ಸ್ಥಿತಿ ಹೇಗಿದೆ ಎಂಬುವುದನ್ನು ಚೆಕ್ ಮಾಡಬಹುದು.