ರಾಜ್ಯ ಸರ್ಕಾರ(State Govt)ವು ಜನರ ಹಿತದೃಷ್ಠಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇರುತ್ತದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಘೋಷಿಸಿದಂತಹ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ(Five Guarantee plan) ಯೋಜನೆಗಳನ್ನು ಇದೀಗ ಸಾಕಾರಗೊಳಿಸುವ ಬೆನ್ನಲ್ಲೇ ಇದೀಗ ರಾಜ್ಯದ ಜನರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಿದೆ.
ಹೌದು, ರಾಜ್ಯ ಸರ್ಕಾರವು ಕಡಿಮೆ ಬೆಲೆಯಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದರ ಬಗ್ಗೆ ಇಂದಿನ ಲೇಖನದಲ್ಲಿ ಮಾಹಿತಿ ನೀಡಲಾಗಿದೆ. ರಾಜ್ಯ ಸರ್ಕಾರವು ಈ ಯೋಜನೆಯ ಮೂಲಕ ನಮ್ಮ ನಾಡಿನ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಸರ್ಕಾರದಿಂದ ನಿವೇಶನ(Hous) ಒದಗಿಸಲು ಮುಂದಾಗಿದೆ. ಇದರಿದ ಜನತೆಗೆ ಸಹಕಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ(C.M Siddaramaih) ಹೇಳಿದ್ದಾರೆ.
ರೇಷನ್ ಕಾರ್ಡ್ ತಿದ್ದುಪಡಿಗೆ ನಾಳೆಯೇ ಕೊನೆ ದಿನ.!
ಹೌದು, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ (Housing estate construction project) ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(C.M Siddaramaih) ತಿಳಿಸಿದ್ದಾರೆ. ಹಾಗಾದ್ರೆ, ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಿಕೊಡಲಾಗಿದೆ.
ಸರ್ಕಾರದಿಂದ ಕಡಿಮೆ ಬೆಲೆಗೆ ಸೈಟ್(site)
ಇತ್ತೀಚಿನ ದಿನಗಳಲ್ಲಿ ಸೈಟ್(site)ಗಳನ್ನು ಖರೀದಿ ಮಾಡಿ ಮನೆ ಕಟ್ಟುವುದು ತಮಾಶೆಯ ಮಾತಲ್ಲ. ಅದರಲ್ಲಿಯೂ ಬೆಳೆಯುತ್ತಿರುವ ನಗರಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರೆಯುವುದು ಕಷ್ಟವೇ ಸರಿ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು 7 ಜಿಲ್ಲೆಗಳಲ್ಲಿ ಕೈಗೆಟುಕುವ ಬೆಲೆಯಲ್ಲಿ ನಿವೇಶನಗಳನ್ನು ಒದಗಿಸಲು ಮುಂದಾಗಿದೆ. ಈ ಕುರಿತು ಕಳೆದ ಗುರುವಾರ(ಆಗಸ್ಟ್ 17) ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಟ್ವೀಟ್(Twitter) ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ವಸತಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.
ಈಗ ಅಧಿಕೃತವಾಗಿ ಈ 7 ಜಿಲ್ಲೆಯ ಮಧ್ಯಮ ವರ್ಗ ಹಾಗೂ ಬಡವರ ಸೂರಿನ ಕನಸಿಗೆ ರಾಜ್ಯ ಸರ್ಕಾರ ಆಸರೆಯಾಗಿ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ. ಆ ಯೋಜನೆ ಮೂಲಕ ಈ ಜಿಲ್ಲೆಗಳಲ್ಲಿ ವಾಸಿಸುವ ಜನರಿಗೆ ಸೂರು ನೀಡುವ ನಿರ್ಧಾರಕ್ಕೆ ಸರ್ಕಾರ ಬಂದಿದೆ. ಎಲ್ಲರಿಗೂ ಸ್ವಂತ ಮನೆಯನ್ನು ಕಟ್ಟುವ ಆಸೆ, ಕನಸು ಇದ್ದೇ ಇರುತ್ತದೆ. ಈ ಕನಸನ್ನು ನೆರವೇರಿಸಿಕೊಳ್ಳಲು ಆಸರೆಯಾಗಿ ನಿಲ್ಲುತ್ತೇವೆ ಎಂದು ರಾಜ್ಯ ಸರ್ಕಾರವು ಭರವಸೆಯನ್ನು ನೀಡಿದೆ.
ಚಾಮರಾಜನಗರ, ಕಲಬುರಗಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದು. ಈ ಮೂಲಕ ನಗರದ ಜನರು ವಲಸೆ ಹೋಗುವುದನ್ನು ತಪ್ಪಿಸಿ ಒಂದೆಡೆ ಕುಟುಂಬದೊಂದಿಗೆ ವಾಸಿಸಲು ಇದು ಅನುಕೂಲ ಮಾಡಿಕೊಡುತ್ತದೆ. ಇದರಿಂದ ಬೆಳೆಯುತ್ತಿರುವ ನಗರಗಳಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಲಿದೆ. ಎಲ್ಲವೂ ಅಂದುಕೊಂಡಂತೇ ಆದರೆ, ಬಡ ಹಾಗೂ ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ಕನಸಿನ ಸೂರು ಸಿಕ್ಕಿ ಅವರ ಕನಸು ನನಸಾಗಲಿದೆ.
ಕಡಿಮೆ ಬೆಲೆಯಲ್ಲಿ ನಿವೇಶನ ದೊರೆಯುತ್ತಿರುವ 7 ಜಿಲ್ಲೆಗಳು
ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿವೆ. ಇಂತಹ ಉತ್ತಮವಾದ ಮಾಹಿತಿಯನ್ನು ಟ್ವೀಟ್ ಮಾಡುವ ಮುಖಾಂತರ ರಾಜ್ಯದ ಜನತೆಗೆ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು… pic.twitter.com/S3jiPdDqvl
— CM of Karnataka (@CMofKarnataka) August 17, 2023