ಮಾನ್ಯ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಮೂಲಕ ದೇಶದ ಇತರ ರಾಜ್ಯಗಳ ಗಮನವನ್ನು ಸೆಳೆದಿದ್ದಾರೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಹೊಸದೊಂದು ಯೋಜನೆ ನೀಡುವ ಮೂಲಕ ಮತ್ತೊಮ್ಮೆ ಕರ್ನಾಟಕ ದೇಶದಲ್ಲೇ ಪ್ರಥಮ ಎನ್ನುವ ದಾಖಲೆ ಸೃಷ್ಟಿಸಿದ್ದಾರೆ.
ಡಿಸೆಂಬರ್ 6ರ ಬುಧವಾರದಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರು (CM Siddaramaih) ಮತ್ತು ಆರೋಗ್ಯ ಸಚಿವರು ಸೇರಿದಂತೆ ಇನ್ನಿತರ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಸಮ್ಮುಖದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗೆ ಹೊಸ ರೂಪ ನೀಡಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಆರೋಗ್ಯ ಕರ್ನಾಟಕ ಎನ್ನುವ ಹೆಸರಿನಲ್ಲಿ ನೂತನ ಮಾದರಿಯ ಹೆಲ್ತ್ ಕಾರ್ಡ್ (Ayusman Bharath Arogya Karnatak healthcard) ಲೋಕಾರ್ಪಣೆಗೊಳಿಸಿದ್ದಾರೆ. ಇದರ ಸಂಬಂಧಿತ ಪ್ರಮುಖ ವರದಿ ನೋಡಿ…
ಸ್ವತಃ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ (Dinesh Gundurao) ಕೂಡ ಈ ಮಾಹಿತಿಯನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಹೊಸ ರೂಪ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಹೆಸರಲ್ಲಿ ಇನ್ಮುಂದೆ ಹೆಲ್ತ್ ಕಾರ್ಡ್‌ಗಳು ರಾಜ್ಯದ ಜನಸಾಮಾನ್ಯರಿಗೆ ತಲುಪಲಿವೆ.
ರಾಜ್ಯದ 5.09 ಕೋಟಿ ಜನರಿಗೆ ಆರು ತಿಂಗಳ ಒಳಗೆ ಹೆಲ್ತ್ ಕಾರ್ಡ್ ವಿತರಿಸುವ ಗುರಿಯನ್ನ ನಾವು ಹೊಂದಿದ್ದೇವೆ. ಮಾನ್ಯ ಮುಖ್ಯಮಂತ್ರಿಗಳು ನೂತನ ಕಾರ್ಡ್‌ಗಳನ್ನ ಇಂದು ಬಿಡುಗಡೆಗೊಳಿಸಿದ್ದಾರೆ. ರಾಜ್ಯದ BPL ಕಾರ್ಡುದಾರರು ರೂ.5 ಲಕ್ಷ ಹಾಗೂ APL ಕಾರ್ಡುದಾರರಿಗೆ ಗರಿಷ್ಠ ರೂ.1.50 ಲಕ್ಷ ಮೌಲ್ಯದ ಚಿಕಿತ್ಸಾ ವೆಚ್ಚವನ್ನ ಸರ್ಕಾರ ಭರಿಸಲಿದೆ.
ಯೋಜನೆಗೆ ಕೇಂದ್ರದಿಂದ 34%ರಷ್ಟು ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ 66%ರಷ್ಟು ಅನುದಾನವನ್ನ ಒದಗಿಸಲಿದೆ. ರಾಜ್ಯದ ಆಸ್ಪತ್ರೆಗಳ ಜೊತೆಗೆ ದೇಶದ ಇತರ ರಾಜ್ಯಗಳ ಆಸ್ಪತ್ರೆಗಳಲ್ಲೂ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಿದ್ದೇವೆ ಎಂದು ಬರೆದು ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನೆನ್ನೆ ನಡೆದ ಕಾರ್ಯಕ್ರಮದಲ್ಲೂ ಕೂಡ ಈ ಯೋಜನೆ ಬಗ್ಗೆ ಮಾತನಾಡಿದ ಆರೋಗ್ಯ ಸಚಿವರು (Health Minister) ಹಿಂದೆ ಕೂಡ ಸಿದ್ದರಾಮಯ್ಯ ಸರ್ಕಾರ ಜಾರಿಯಲ್ಲಿದ್ದಾಗ ಆಯುಷ್ಮಾನ್ ಕಾರ್ಡು ಜಾರಿಗೆ ಬಂದು ಅನೇಕರು ಇದರ ಪ್ರಯೋಜನವನ್ನು ಕೂಡ ಪಡೆದಿದ್ದರು.
ಬಹಳ ಜನರಿಗೆ ಇದರಿಂದ ಆಗುತ್ತಿರುವ ಉಪಯೋಗವನ್ನು ಅರಿತು ಮತ್ತೊಮ್ಮೆ ಹೊಸ ರೂಪದಲ್ಲಿ ಇನ್ನಷ್ಟು ಯೋಚನೆಗಳ ಅನುಕೂಲತೆಯನ್ನು ಕೂಡ ಸೇರಿಸಿ ನೂತನ ಕಾರ್ಡ್ ವಿತರಣೆ ಮಾಡುತ್ತಿದ್ದೇವೆ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದು ನುಡಿದರು.
ಯೋಜನೆಯ ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು 66% ರಷ್ಟು ನೀಡುತ್ತಿದ್ದರೆ ಕೇಂದ್ರ ಸರ್ಕಾರವು ಅನುದಾನ 34% ರಷ್ಟಿದೆ. ಈ ಯೋಜನೆಯಡಿಯಲ್ಲಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ ರೂ. 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು Family Floater ಆಧಾರದ ಮೇಲೆ ಬಳಸಿಕೊಳ್ಳಬಹುದಾಗಿದೆ.
ಈ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ID (ABHA ID) ಯೊಂದಿಗೆ ಜೋಡಿಸಲಾಗಿರುತ್ತದೆ. ಇದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ಸಹಾ ನೆರವಾಗುತ್ತದೆ.
ಪಡಿತರ ಚೀಟಿಯೊಂದಿಗೆ ಜೋಡಿಸಲಾದ ಮೂಲ ಆಧಾರ್ ಗುರುತಿನ ಚೀಟಿಯ ಸಹಾಯದಿಂದ ಹತ್ತಿರದ ಗ್ರಾಮ ಒನ್ ಕೇಂದ್ರಗಳು ಅಥವಾ ನಾಗರೀಕ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಳನ್ನು ಸುಲಭವಾಗಿ ನೊಂದಾಯಿಸಿ ಪಡೆಯಬಹುದು.