ಕರ್ನಾಟಕದಲ್ಲಿ ಮನೆಯೊಡತಿಗೆ ಮಾಸಿಕ 2 ಸಾವಿರ ರೂಪಾಯಿ ನೀಡುವ ಈಗ ಗೃಹಲಕ್ಷ್ಮಿ ಯೋಜನೆ(Gruha Lakshmi scheme)ಗೆ ಚಾಲನೆ ದೊರಕಿದೆ. ಆದರೆ, ಸಾಕಷ್ಟು ಫಲಾನುಭವಿಗಳು ತಮ್ಮ ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಇತ್ಯಾದಿಗಳಿಗೆ ಪರದಾಡುತ್ತಿದ್ದಾರೆ. ಕರ್ನಾಟಕ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಸಾಕಷ್ಟು ಫಲಾನುಭವಿಗಳಿಗೆ ಅನೇಕ ತೊಂದರೆಗಳು ಎದುರಾಗುತ್ತಿವೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಪಡಿತರ ಚೀಟಿ (ration card update karnataka) ಪ್ರಮುಖವಾಗಿ ಬೇಕಿರುತ್ತದೆ. ಪಡಿತರ ಚೀಟಿಯಲ್ಲಿ ಮನೆಯೊಡತಿಯ ಹೆಸರು ಇರಬೇಕಾಗುತ್ತದೆ. ಆದರೆ, ರೇಷನ್ ಕಾರ್ಡ್ನಲ್ಲಿ ಒಂದು ಹೆಸರು, ಆಧಾರ್ ಕಾರ್ಡ್ನಲ್ಲಿ ಇನ್ನೊಂದು ಹೆಸರು ಇರುತ್ತದೆ. ಅನೇಕ ಕಾರಣಗಳಿಂದ ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ ಮಾಡುವಂತಹ ಅವಶ್ಯಕತೆ ಇರುತ್ತದೆ.
ಈ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್ 5 ಲಕ್ಷದವರೆಗೆ ಉಚಿತ ಚಿಕಿತ್ಸೆ, ನೀವೂ ಅರ್ಜಿ ಸಲ್ಲಿಸಿ.!
ಇದೀಗ ರಾಜ್ಯ ಸರ್ಕಾರ(State Govt)ವು ಪಡಿತರ ಚೀಟಿ(Ration card)ಯಲ್ಲಿ ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಆಗಸ್ಟ್ 18ರ ಮಧ್ಯಾಹ್ನ 12 ಗಂಟೆಯಿಂದ ವೆಬ್ ಸೈಟ್ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.
ಚಾಲ್ತಿ ಇರುವ ಬಿಪಿಎಲ್ (BPL), ಎಪಿಎಲ್ (APL) ಪಡಿತರ ಚೀಟಿಗಳ ತಿದ್ದುಪಡಿ, ಮನೆ ಯಜಮಾನಿ ಹೆಸರು ಬದಲಾವಣೆ, ಹೊಸ ಹೆಸರು ಸೇರ್ಪಡೆ ಅಥವಾ ಕೈಬಿಡುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಡ್ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ನೊಂದಿಗೆ ಆದಾಯ ಪ್ರಮಾಣ ಪತ್ರ(Income certificate) ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ದೇವರ ಫೋಟೋದಿಂದ ಪದೇ ಪದೇ ಹೂ ಬೀಳುತ್ತಿದ್ದರೆ ಅದರ ಅರ್ಥ ಏನು ಗೊತ್ತಾ.?
* ಮೊದಲು ಇಲಾಖೆಯ ಅಧಿಕೃತ ವೆಬ್ ಸೈಟ್ https://ahara.kar.nic.in/home ಭೇಟಿ ನೀಡಿ.
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿಯನ್ನೂ ಕಳಿಸಲಾಗುತ್ತದೆ. ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ahara.kar.nic.in ಎಂಬ ವೆಬ್ಸೈಟ್ ಮೂಲಕ ಪಡಿತರ ಚೀಟಿ ನಿರ್ವಹಿಸುತ್ತದೆ.