ದೇಶದಾದ್ಯಂತ ಇರುವ ಎಲ್ಲಾ ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಇದು ಸಿಹಿ ಸುದ್ದಿ. ಕೃಷಿ ಇಲಾಖೆಯಲ್ಲಿ ಖಾಲಿ ಇರುವ 1000ಕ್ಕೂ ಹೆಚ್ಚು ಹುದ್ದೆಗಳಿಗ ಭರ್ತಿ ಮಾಡಿಕೊಳ್ಳಲು ಇಲಾಖೆ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕೂಡ ಆಹ್ವಾನಿಸಲಾಗಿದೆ. ಇದಕ್ಕಾಗಿ ಇಲಾಖೆಯು ಅರ್ಜಿ ಸಲ್ಲಿಸುವವರಿಗೆ ಇರಬೇಕಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಾನ ಮಾನದಂಡ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವುದಕ್ಕೆ ಬೇಕಾಗುವ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಆಯ್ಕೆ ಪ್ರಕ್ರಿಯೆ ಮುಂತಾದ ಸಂಪೂರ್ಣ ಮಾಹಿತಿಗಳನ್ನು ಒಳಗೊಂಡ ವಿವರಗಳನ್ನು ಸಹ ಅಧಿಸೂಚನೆಯಲ್ಲಿ ತಿಳಿಸಿದೆ.
ಕೇಂದ್ರ ಸರ್ಕಾರದ ಹುದ್ದೆ ಪಡೆಯುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸೂಚಿಸಿರುವ ಮಾರ್ಗಸೂಚಿ ಪ್ರಕಾರ ಅರ್ಜಿ ಸಲ್ಲಿಸಿ, ಉದ್ಯೋಗ ಪಡೆಯುವ ಪ್ರಯತ್ನ ಮಾಡಬಹುದು. ಈ ಅಂಕಣದಲ್ಲಿ
ಸಹ ಆಕಾಂಕ್ಷಿಗಳಿಗೆ ಅನುಕೂಲಕ್ಕಾಗಿ ಕೆಲ ಪ್ರಮುಖ ಅಂಶಗಳ ವಿವರ ತಿಳಿಸಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡಿ.
ಸಂಸ್ಥೆ:- ಕೃಷಿ ನಿರ್ವಹಣೆ ಮತ್ತು ವಿಸ್ತರಣಾ ತರಬೇತಿ ಸಂಸ್ಥೆ.
ಹುದ್ದೆಗಳ ಸಂಖ್ಯೆ:- 1041
ಉದ್ಯೋಗ ಸ್ಥಳ:- ಭಾರತದಾದ್ಯಂತ
● ಹುದ್ದೆಗಳ ವಿವರ:-
1. ತಾಂತ್ರಿಕ ವ್ಯವಸ್ಥಾಪಕ
2. ಸಹಾಯಕ ತಾಂತ್ರಿಕ ವ್ಯವಸ್ಥಾಪಕ
3. ಸ್ಟೆನೋಗ್ರಾಫರ್
4. ಅಕೌಂಟೆಂಟ್
ವೇತನ ಶ್ರೇಣಿ:- 25,000 ಮಾಸಿಕವಾಗಿ…
● ಅರ್ಜಿ ಸಲ್ಲಿಸಲು ಬೇಕಾಗಿರುವ ವಿದ್ಯಾರ್ಹತೆ:-
1. ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೃಷಿ ವಿಷಯದಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾದವರು.
2. ಬಿಕಾಂ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
● ವಯಸ್ಸಿನ ಮಿತಿ:-
1. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಸರಿಯಾಗಿ ಕಡ್ಡಾಯವಾಗಿ ಕನಿಷ್ಠ 18 ವರ್ಷಗಳು ಪೂರ್ತಿಗೊಂಡಿರಬೇಕು
2. ಗರಿಷ್ಠ 40 ವರ್ಷಗಳು ಮೀರಿರಬಾರದು
● ವಯೋಮಾನ ಸಡಿಲಿಕೆ:-
1. OBC ಅಭ್ಯರ್ಥಿಗಳಿಗೆ ಮೂರು ವರ್ಷಗಳು
2. SC & ST ಅಭ್ಯರ್ಥಿಗಳಿಗೆ ಐದು ವರ್ಷಗಳು
● ಅರ್ಜಿ ಶುಲ್ಕ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ವಿಧಿಸಿಲ್ಲ.
● ಆಯ್ಕೆ ವಿಧಾನ :-
1. ನೇರ ಸಂದರ್ಶನ
2. ದಾಖಲೆಗಳ ಪರಿಶೀಲನೆ
● ಅರ್ಜಿ ಸಲ್ಲಿಸುವ ವಿಧಾನ:-
1. ಅಧಿಸೂಚಿಯಲ್ಲಿ ಸೂಚಿಸಲಾದ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.
2. ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್ಸೈಟ್ ಮೂಲಕ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಮತ್ತೊಮ್ಮೆ ಪರಿಶೀಲಿಸಬೇಕು.
3. ಆಸಕ್ತಿ ಮತ್ತು ಅರ್ಹತೆ ಇದ್ದಲ್ಲಿ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಫಾರಂ ಭರ್ತಿ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಸಬ್ಮಿಟ್ ಬಟನ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
4. ನಿಮ್ಮ ಭವಿಷ್ಯದ ಅನುಕೂಲತೆಗಾಗಿ ಅರ್ಜಿ ಸಲ್ಲಿಸಿರುವ ಪ್ರಿಂಟೌಟ್ ತೆಗೆದಿಟ್ಟುಕೊಳ್ಳುವುದು ಸೂಕ್ತ ಅಥವಾ ಅರ್ಜಿ ಸಂಖ್ಯೆ, ವಿನಂತಿ ಸಂಖ್ಯೆ ಇತ್ಯಾದಿಗಳನ್ನು ಬರೆದಿಟ್ಟುಕೊಳ್ಳಬೇಕು.
● ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
1. ಇತ್ತೀಚಿನ ಭಾವಚಿತ್ರ ಮತ್ತು ಸಹಿ
2. ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
3. ಆಧಾರ್ ಕಾರ್ಡ್
4.ಜಾತಿ ಮತ್ತು ಆದಾಯ ಪ್ರಮಾಣ ಪತ್ರ
5.ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
6.ನಿವಾಸ ದೃಢೀಕರಣ ಪತ್ರ
● ಪ್ರಮುಖ ದಿನಾಂಕಗಳು:-
1. ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 05 ಏಪ್ರಿಲ್, 2023.
2. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30 ಏಪ್ರಿಲ್, 2023.