ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು (Government Schemes for Womans) ಜಾರಿಗೆ ತಂದಿದ್ದಾರೆ. ಇತ್ತೀಚಿಗೆ ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿ ನಾರಿ ಶಕ್ತಿ ವಂದನ್ ಕಾಯ್ದೆ ಜಾರಿ ಮಾಡಲಾಯಿತು. ದೇಶದ ಸಾಮಾನ್ಯ ಮಹಿಳೆಯರೆಲ್ಲರಿಗೂ ಅನುಕೂಲವಾಗುವಂತಹ ಯೋಜನೆಗಳ ಉದಾಹರಣೆಯೂ ಸಾಕಷ್ಟಿದೆ.
ಮಾತೃಶ್ರೀ, ಮಾತೃ ವಂದನ ವಿಶೇಷವಾಗಿ ಇತ್ತೀಚೆಗೆ ಕರ್ನಾಟಕ ಸರ್ಕಾರವು ಜಾರಿಗೆ ತಂದ ಗ್ಯಾರೆಂಟಿ ಯೋಜನೆಗಳನ್ನು ಉದಾಹರಿಸಬಹುದು. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳು ಮಹಿಳೆಯರಿಗಾಗಿ ಮೀಸಲಾಗಿವೆ. ಇದರೊಂದಿಗೆ ಗ್ಯಾರಂಟಿಯೇತರವಾಗಿ ಮತ್ತೊಂದು ಹೊಸ ಯೋಜನೆ ಘೋಷಿಸಿದೆ.
ಉದ್ಯೋಗಿನಿ ಯೋಜನೆ (Udyogini Scheme) ಎನ್ನುವ ನೂತನ ಯೋಜನೆಯಡಿ ಕನಿಷ್ಠ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲ ಸೌಲಭ್ಯ ನೀಡುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಈ ಸೌಲಭ್ಯ ನೀಡಲಾಗುತ್ತಿತ್ತು, ಈ ಕುರಿತ ಅಧಿಕೃತ ಪ್ರಕಟಣೆಯು ಕೂಡ ಸರ್ಕಾರದಿಂದ ಹೊರ ಬಿದ್ದಿದೆ.
ಸ್ವಾವಲಂಬಿಯಾಗಿ ಬದುಕಲು ಇಚ್ಚಿಸುವ ಮಹಿಳೆಯರು ಉದ್ಯೋಗಿನಿ ಯೋಜನೆ ಮೂಲಕ ನೆರವು ಪಡೆದು ಆದಾಯೋತ್ಪನ್ನ ಚಟುವಟಿಕೆಗಳಿಗೆ ಇದನ್ನು ವಿನಿಯೋಗಿಸಿಕೊಳ್ಳಬಹುದು. ಉದ್ಯೋಗಿನಿ ಯೋಜನೆಗೆ ಎಲ್ಲಿ ಅರ್ಜಿ ಸಲ್ಲಿಸಬೇಕು? ಏನೆಲ್ಲ ದಾಖಲೆಗಳನ್ನು ನೀಡಬೇಕು? ಮತ್ತು ಇದಕ್ಕೆ ವಿಧಿಸಿರುವ ಮನದಂಡಗಳೇನು? ಎನ್ನುವುದರ ಪೂರ್ತಿ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ರಾಜ್ಯದ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಅನುಕೂಲತೆ ಪಡೆಯಬಹುದಾಗಿದೆ ಹಾಗಾಗೀ ತಪ್ಪದೆ ಈ ಮಾಹಿತಿಯನ್ನು ಎಲ್ಲಾ ಮಹಿಳೆಯರಿಗೂ ಶೇರ್ ಮಾಡಿ.
ಯೋಜನೆ ಹೆಸರು: ಉದ್ಯೋಗಿನಿ ಯೋಜನೆ…
ಅರ್ಜಿ ಸಲ್ಲಿಸಲು ಕಂಡೀಷನ್ ಗಳು:-
* ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರುವ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದು.
* ಮಹಿಳೆಯ ವಯಸ್ಸು 18 ರಿಂದ 55 ವರ್ಷದ ಒಳಗಿರಬೇಕು * ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಇಚ್ಚಿಸುವ ಮಹಿಳೆಯರು ಈ ಉದ್ಯೋಗಿನಿ ಯೋಜನೆಯಡಿ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮಗಳ ಮೂಲಕ ಸಹಾಯಧನ ಪಡೆಯಬಹುದು.
* ಈ ಯೋಜನೆಯ ಸಹಾಯಧನ dbt ಮೂಲಕವೇ ಫಲಾನುಭವಿಗಳ ಖಾತೆಗೆ ವರ್ಗಾವಣೆಯಿಗುವುದು, ಹಾಗಾಗಿ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಿರಬೇಕು, ಖಾತೆ ಆಕ್ಟಿವ್ ಆಗಿರಬೇಕು.
* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟನಲ್ಲಿಯೇ ಅರ್ಜಿ ಸಲ್ಲಿಸಬೇಕು.
* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾನುಭವಿಗಳು ಮಾನ್ಯ ಸಚಿವರು / ಮಾನ್ಯ ಶಾಸಕರು / ಕರ್ನಾಟಕ ಸರ್ಕಾರದ ಮಾನ್ಯ ಅಧ್ಯಕ್ಷರು /ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು.
* SC/ST ಫಲಾನುಭವಿಗಳಿಗೆ ಆದಾಯದ ಮಿತಿ 2 ಲಕ್ಷ.
* ಸಾಮಾನ್ಯ ವರ್ಗದ ಮಹಿಳೆಯರಿಗೆ ಆದಾಯದ ಮಿತಿ 1.5 ಲಕ್ಷ.
ಸಿಗುವ ಸಹಾಯಧನ:-
* SC/ST ಫಲಾನುಭವಿಗಳಿಗೆ ಘಟಕ ವೆಚ್ಚ 1 ಲಕ್ಷದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಲಭ್ಯವಿರುತ್ತದೆ. ಈ ಸಾಲಕ್ಕೆ ನಿಗಮದ ವತಿಯಿಂದ 50%ರಷ್ಟು ಸಹಾಯಧನ ಸಿಗಲಿದ್ದು, ಉದ್ಯೋಗಿನಿ ಯೋಜನೆಗೆ ನಿಗಮದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು.
* ಸಾಮಾನ್ಯ ವರ್ಗದ ಮಹಿಳೆಯರಿಗೆ ಘಟಕ ವೆಚ್ಚ 3 ಲಕ್ಷದವರೆಗೂ ಬ್ಯಾಂಕ್ ಗಳಲ್ಲಿ ಸಾಲ ಸೌಲಭ್ಯ ಸಿಗಲಿದೆ, ಉದ್ಯೋಗಿನಿ ಯೋಜನೆ ಸಹಾಯಧನ ಕೋರಿ ನಿಗಮಕ್ಕೆ ಅರ್ಜಿ ಸಲ್ಲಿಸಿ 30%ರಷ್ಟು ಸಹಾಯಧನ ಪಡೆಯಬಹುದು.
ಅರ್ಜಿ ಸಲ್ಲಿಸುವ ವಿಧಾನ:-
* ಹತ್ತಿರದ ಬಾಪೂಜಿ ಸೇವಾ ಕೇಂದ್ರ / ಗ್ರಾಮ ಒನ್ / ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ವೆಬ್ ಸೈಟ್ ವಿಳಾಸ:-
https://sevasindhu.karnataka.gov.in
ಹೆಚ್ಚಿನ ಮಾಹಿತಿಗಾಗಿ:-
* ನಿಮ್ಮ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ಕೊಡಿ ಅಥವಾ ಅಂಗನವಾಡಿ ಕಾರ್ಯಕರ್ತೆಯರ ಬಳಿ ಮಾಹಿತಿ ಪಡೆಯಿರಿ
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22.11.2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22.12.2023.