ಭಾರತೀಯ ಆಹಾರ ನಿಗಮದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿಗಮದಿಂದ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಆಗಿದೆ. ಇವು ಕೇಂದ್ರ ಸರ್ಕಾರದ ಹುದ್ದೆಗಳಾಗಿದ್ದು ಸರ್ಕಾರಿ ಹುದ್ದೆ ಪಡೆಯಬೇಕು ಎಂದು ಹಂಬಲಿಸುವ ಆಕಾಂಕ್ಷಿಗಳಿಗೆ ಸದಾವಕಾಶವಾಗಿದೆ.
ಈ ಹುದ್ದೆಗಳಿಗೆ ಸೂಚಿಸಿರುವ ಅರ್ಹತೆ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಪ್ರಕಟಣೆಯಲ್ಲಿರುವ ಕೆಲವು ಪ್ರಮುಖ ಅಂಶಗಳಾದ ಹುದ್ದೆಗಳ ವಿವರ, ಒಟ್ಟು ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ವಿಧಾನ, ಪ್ರಮುಖ ದಿನಾಂಕಗಳು ಇನ್ನಿತರ ವಿಷಯಗಳ ಬಗ್ಗೆ ಈ ಅಂಕಣದಲ್ಲಿ ಮಾಹಿತಿ ತಿಳಿಸುತ್ತಿದ್ದೇವೆ…
ನೇಮಕಾತಿ ಸಂಸ್ಥೆ:- ಭಾರತೀಯ ಆಹಾರ ನಿಗಮ (FCI)
ಹುದ್ದೆಗಳು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 345
ಹುದ್ದೆಗಳ ವಿವರ:-
* ಆಹಾರ ಸರಬರಾಜು ನಿರೀಕ್ಷಕರು
* ಉನ್ನತ ಮಟ್ಟದ ಗುಮಾಸ್ತ
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:-
* ಆಹಾರ ಸರಬರಾಜು ನಿರೀಕ್ಷಕರು – ರೂ.29,200 ರಿಂದ ರೂ.92,300
* ಉನ್ನತ ಮಟ್ಟದ ಗುಮಾಸ್ತ – ರೂ.25,500 ರಿಂದ 81,100
ಶೈಕ್ಷಣಿಕ ವಿದ್ಯಾರ್ಹತೆ:-
* ಆಹಾರ ಸರಬರಾಜು ನಿರೀಕ್ಷಕರು ಮತ್ತು ಉನ್ನತ ಮಟ್ಟದ ಗುಮಾಸ್ತ ಈ ಎರಡು ಹುದ್ದೆಗಳಿಗೂ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು
* ಒಂದು ವೇಳೆ ಆಯ್ಕೆ ಆಗುವ ಅಭ್ಯರ್ಥಿಗಳು ಪರೀಕ್ಷೆಗಳಲ್ಲಿ ಒಂದೇ ರೀತಿಯ ಅಂಕಗಳನ್ನು ಹೊಂದಿದ್ದರೆ ಆಹಾರ ತಂತ್ರಜ್ಞಾನ ಮತ್ತು ಆಹಾರ ವಿಜ್ಞಾನ ವಿಷಯದಲ್ಲಿ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮರಾಠಿ ಭಾಷೆ ಚೆನ್ನಾಗಿ ಗೊತ್ತಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 43 ವರ್ಷಗಳು
ವಯೋಮಿತಿ ಸಡಿಲಿಕೆ:-
* Sc / ST ಪ್ರವರ್ಗ – 1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ
* OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
* ಮೊಬೈಲ್ ಅಥವಾ ಲ್ಯಾಪ್ಟಾಪ್ ಅಥವಾ ಸೈಬರ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಬಹುದು
* ಮೊದಲಿಗೆ fci ಅಧಿಕೃತ ವೆಬ್ಸೈಟ್ಗೆ ಭೇಟಿಕೊಟ್ಟು ನೇಮಕಾತಿ ಕುರಿತು ಹೊರಡಿಸಿರುವ ಅಧಿಸೂಚನೆಯಲ್ಲಿರುವ ಎಲ್ಲಾ ಅಂಶಗಳನ್ನು ಮತ್ತೊಮ್ಮೆ ತಪ್ಪದೆ ಓದಿ ಅರ್ಥ ಮಾಡಿಕೊಳ್ಳಿ
* ಆ ಪ್ರಕಾರವಾದ ಎಲ್ಲಾ ಮಾನದಂಡಗಳನ್ನು ಪೂರೈಸುವವರು ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ
* ಅರ್ಜಿ ಫಾರಂನಲ್ಲಿ ಕೇಳಲಾಗಿರುವ ವೈಯಕ್ತಿಕ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿ ಮಾಡಬೇಕಾಗಿದ್ದಲ್ಲಿ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಿ
* ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೆ ಅರ್ಜಿ ಸಲ್ಲಿಕೆ ಸ್ವೀಕೃತಿ ಪತ್ರ ಹಾಗೂ ಇ-ರಶೀದಿಯನ್ನು ಪ್ರಿಂಟ್ ಔಟ್ ತಪ್ಪದೇ ಪಡೆದುಕೊಳ್ಳಿ.
ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸಿದ ಎಲ್ಲರಿಗೂ ಕಂಪ್ಯೂಟರ್ ಬೇಸ್ಡ್ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ
* ಸ್ಪರ್ಧಾತ್ಮಕ ಪರೀಕ್ಷೆಯ ಸುತ್ತಿನಲ್ಲಿ ಆಯ್ಕೆ ಆದವರಿಗೆ ಸಂದರ್ಶನ ಮತ್ತು ದಾಖಲೆಗಳ ಪರಿಶೀಲ ನಡೆಸಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 13 ಡಿಸೆಂಬರ್, 2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಡಿಸೆಂಬರ್ , 2023.