ಕರ್ನಾಟಕ ಸರ್ಕಾರದ ವಸತಿ ಇಲಾಖೆಯ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಕಡೆಯಿಂದ ನನ್ನ ಮನೆ ವಸತಿ ಯೋಜನೆಗೆ ಹೇಗೆ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸುವುದು ಹೇಗೆ ಹಾಗೂ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಹೀಗೆ ಈ ಎಲ್ಲ ವಿಚಾರವಾಗಿ ಸಂಬಂಧಿ ಸಿದ ಹಲವಾರು ಮಾಹಿತಿಗಳ ಬಗ್ಗೆ ಈ ದಿನ ತಿಳಿದುಕೊಳ್ಳುತ್ತಾ ಹೋಗೋಣ.
ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿರುವಂತಹ ದಾಖಲಾತಿಗಳು ನೋಡುವುದಾದರೆ.
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್
* ವೋಟರ್ ಐಡಿ ಕಾರ್ಡ್
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ವಾಸ ಸ್ಥಳ ದೃಢೀಕರಣ ಪತ್ರ
* ಬಹಳ ಮುಖ್ಯವಾಗಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ಸಂಖ್ಯೆ ಕಡ್ಡಾಯವಾಗಿ ಇರುವಂತದ್ದು.
ಹೀಗೆ ಇಷ್ಟು ದಾಖಲಾತಿಗಳು ಇದ್ದರೆ ಸಾಕು ನೀವು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು.
ಹಾಗಾದರೆ ಈ ಒಂದು ಅರ್ಜಿ ಯಾರಿಗೆಲ್ಲ ಅನ್ವಯವಾಗುತ್ತದೆ ಎಂದು ನೋಡುವುದಾದರೆ.
* ಈ ಒಂದು ಯೋಜನೆ ಅಂದರೆ ನನ್ನ ಮನೆ ವಸತಿ ಯೋಜನೆಗೆ ಪ್ರತಿಯೊಬ್ಬ ವರ್ಗದವರು ಕೂಡ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಆದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ 30000 ಹೆಚ್ಚುವರಿಯಾಗಿ ಸಿಗುತ್ತದೆ ಹೊರತು ಇನ್ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ.
ಹಾಗಾಗಿ ಪ್ರತಿಯೊಬ್ಬ ಜನಾಂಗದವರು ಕೂಡ ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಇದರಿಂದ ಸಿಗುವಂತಹ ಎಲ್ಲಾ ರೀತಿಯ ಪ್ರಯೋಜನಗಳನ್ನು ಪ್ರತಿಯೊಬ್ಬರೂ ಸಹ ಪಡೆದುಕೊಳ್ಳಬಹುದಾಗಿದೆ.
ಹಾಗಾದರೆ ಈ ಒಂದು ಅರ್ಜಿಯನ್ನು ಹೇಗೆ ಸಲ್ಲಿಸುವುದು ಇದರ ವಿಧಾನ ಯಾವ ರೀತಿಯಾಗಿ ಇರುತ್ತದೆ ಎಂದು ಈ ಕೆಳಗೆ ತಿಳಿಯೋಣ.
ಮೊದಲನೆಯದಾಗಿ ನೀವು ಈ ಒಂದು ಯೋಜನೆಯ ಮೂಲ ವೆಬ್ಸೈಟ್ ಗೆ ಹೋಗಬೇಕಾಗುತ್ತದೆ ಆನಂತರ ಅಲ್ಲಿ ಅರ್ಜಿ ಸಲ್ಲಿಕೆ ಎನ್ನುವಂತಹ ಆಯ್ಕೆ ಮೇಲೆ ಓಕೆ ಒತ್ತಬೇಕು ಆನಂತರ ಅಲ್ಲಿ ಅರ್ಜಿ ಹಾಕುವಂತಹ ಸಂಪೂರ್ಣವಾದ ವಿಧಾನ ಬರುತ್ತದೆ.
ಅಲ್ಲಿ ಕೇಳಿರುವಂತಹ ಎಲ್ಲಾ ರೀತಿಯ ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಹಾಕುವುದರ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಮೊದಲೇ ಹೇಳಿದಂತೆ ಬಹಳ ಮುಖ್ಯವಾಗಿ ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವಂತಹ ಮೊಬೈಲ್ ನಂಬರ್ ಸರಿಯಾಗಿ ಇರುವುದು ಬಹಳ ಮುಖ್ಯವಾಗಿರುತ್ತದೆ.
ಏಕೆಂದರೆ ನಿಮ್ಮ ಮೊಬೈಲ್ ಗೆ ಒಂದು ಓಟಿಪಿ ಬರುತ್ತದೆ. ಆನಂತರ ಈ ಒಂದು ಅರ್ಜಿಯನ್ನು ಲಾಗಿನ್ ಮಾಡಲಾಗುತ್ತದೆ. ಆದ್ದರಿಂದ ಮೊಬೈಲ್ ಸಂಖ್ಯೆ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವುದು ಕಡ್ಡಾಯ ಇದರ ಜೊತೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವಂತಹ ವ್ಯಕ್ತಿ ಯಾವ ಒಂದು ಕೆಲಸವನ್ನು ಮಾಡುತ್ತಿದ್ದಾನೆ ಹಾಗೂ ಆ ಕೆಲಸಕ್ಕೆ ಸಂಬಂಧಿಸಿದ ಹಲವಾರು ರೀತಿಯ ದಾಖಲಾತಿಗಳನ್ನು ಸಹ ಅಲ್ಲಿ ಕೇಳಲಾಗುತ್ತದೆ.
ಉದಾಹರಣೆಗೆ ಕೂಲಿ ಕೆಲಸ ಅಥವಾ ಯಾವುದಾ ದರೂ ಉದ್ಯೋಗದಲ್ಲಿರುವುದು ಹೀಗೆ ಯಾವುದೇ ರೀತಿಯ ಕೆಲಸ ಮಾಡುತ್ತಿದ್ದರು ಅದಕ್ಕೆ ಸಂಬಂಧಿಸಿದ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆನಂತರ ಅರ್ಜಿದಾರರ ಅರ್ಜಿಯ ಸ್ಥಿತಿಯ ಬಗ್ಗೆ, ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂದೇಶವನ್ನು ಅರ್ಜಿದಾರರ ಮೊಬೈಲ್ ಸಂಖ್ಯೆಗೆ ರವಾನಿಸಲಾಗುವುದು. ಹಾಗೂ ಆ ಒಂದು ಸಂದೇಶವನ್ನು ನೀವು ಜೋಪಾನವಾಗಿ ಇಟ್ಟುಕೊಳ್ಳುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ.