ಕರ್ನಾಟಕ ರಾಜ್ಯದಾದ್ಯಂತ 2023-24ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (Students) ಸರ್ಕಾರದ (government) ವತಿಯಿಂದ ಸಿಹಿ ಸುದ್ದಿ ಇದೆ. ಯಾಕೆಂದರೆ, ಮಾನ್ಯ ಮುಖ್ಯಮಂತ್ರಿಗಳು (CM) ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ (Free laptop Scheme) ಮಾಡಲು ಸೂಚನೆ ನೀಡಿದ್ದಾರೆ. ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಎಷ್ಟು ಅಗತ್ಯವಾದ ಪರಿಕರವಾಗಿದೆ ಎನ್ನುವುದರ ಅರಿವು ಬಹುತೇಕ ಎಲ್ಲರಿಗೂ ಕೂಡ ಇದೆ.
ಕಾಲ ಬೆಳೆದಂತೆಲ್ಲ ಅದಕ್ಕೆ ಹೊಂದಿಕೊಂಡು ಬದಲಾಗುವ ಪದ್ಧತಿಯ ಜೊತೆಗೆ ಶಿಕ್ಷಣವು ಕೂಡ ಬದಲಾಗಬೇಕಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಕೂಡ ತಂತ್ರಜ್ಞಾನದ ಬಳಕೆ ಮಾಡುವುದರಿಂದ ವಿದ್ಯಾರ್ಥಿಗಳ ಜ್ಞಾನದ ಮಟ್ಟ ಸುಧಾರಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಅವರ ಉದ್ಯೋಗ ಸಮಯದಲ್ಲಿ ಇದು ಪೂರಕವಾಗುತ್ತದೆ. ಹಾಗಾಗಿ ಕಂಪ್ಯೂಟರ್ ಆಧಾರಿತ ಶಿಕ್ಷಣ ಈಗ ಬಹಳ ಅವಶ್ಯವೆನಿಸಿದೆ.
ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ವಿಸ್ತರಣೆ, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಕಾಯುತ್ತಿರುವವರಿಗೆ ಮತ್ತೊಂದು ಅವಕಾಶ.!
ಎಲ್ಲರಿಗೂ ಕೂಡ ಈ ರೀತಿ ಕಂಪ್ಯೂಟರ್ ಅಥವಾ ಪ್ರತ್ಯೇಕವಾದ ಲ್ಯಾಪ್ಟಾಪ್ ಹೊಂದಲು ಸಾಧ್ಯವಿರುವುದಿಲ್ಲ. ಅಂತಹ ವರ್ಗಗಳನ್ನು ಗುರುತಿಸಿ ಸರ್ಕಾರವು ಆ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದೆ. ಇಲ್ಲಿಯವರೆಗೂ ಕೂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅಥವಾ ಆರ್ಥಿಕವಾಗಿ ಹಿಂದುಳಿದ ಅಥವಾ ಕಾರ್ಮಿಕರ ಮಕ್ಕಳುಗಳು ಹೀಗೆ ಒಂದು ಸಮುದಾಯವನ್ನು ಗುರುತಿಸಿ ಆ ಮೂಲಕ ಸಾಧ್ಯವಾದಷ್ಟು ವಿದ್ಯಾರ್ಥಿಗಳಿಗೆ ಸರ್ಕಾರ ಲ್ಯಾಪ್ಟಾಪ್ ವಿತರಣೆ ಮಾಡುತ್ತಿತ್ತು.
ಆದರೆ ಈಗ ರಾಜ್ಯದ ನೂತನ ಮುಖ್ಯಮಂತ್ರಿ ಆಗಿರುವಂತಹ ಸಿದ್ದರಾಮಯ್ಯ (CM Siddaramaiah) ಅವರು ಸಚಿವ ಸಂಪುಟ ಜೊತೆ ಚರ್ಚಿಸಿ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್ಟಾಪ್ ವಿತರಣೆ ಮಾಡುವ ಕುರಿತು ಸೂಚನೆ ನೀಡಿದ್ದಾರೆ. ಇದರ ಸಂಬಂಧಿತವಾಗಿ ವಿಷಯವನ್ನು ಸರಣಿ ಟ್ವೀಟ್ ಗಳ (tweet) ಮೂಲಕ ಅನೌನ್ಸ್ ಕೂಡ ಮಾಡಿದ್ದಾರೆ.
FDA, SDA ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ 58,250/- ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!
21.8.2023ರಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ಟ್ವಿಟರ್ ಖಾತೆಯಿಂದ ಪೋಸ್ಟ್ ಆಗಿದೆ. ಟ್ವೀಟ್ ನಲ್ಲಿ ಅವರು ತಿಳಿಸಿರುವ ಮಾಹಿತಿಯೇನೆಂದರೆ ಈ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (Schedule Cast and Schedule Tribes) ಸೇರಿದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅನ್ನು SCST/TSP ಯೋಜನೆಯಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಲ್ಯಾಪ್ಟಾಪ್ ವಿತರಣೆ ಸಂಬಂಧ SCST/TSP ಯೋಜನೆ ಅಡಿ 230 ಕೋಟಿ ಒದಗಿಸುವಂತೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ (Welfare department Secretary) ತಿಳಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ. ಇದಾದ ಬಳಿಕ ಇದರ ಜೊತೆಗೆ ಮತ್ತೊಂದು ಟ್ವೀಟ್ ಕೂಡ ಮಾಡಿ ಮುಖ್ಯಮಂತ್ರಿಗಳು ಅದರಲ್ಲಿ ವಿ.ವಿಯಲ್ಲಿರುವ ಎಲ್ಲ ಸಮುದಾಯಗಳ ಪ್ರತಿ ವಿದ್ಯಾರ್ಥಿಗೂ ಕೂಡ ಲ್ಯಾಪ್ಟಾಪ್ ವಿತರಿಸಬೇಕಾಗಿದ್ದು, ಮುಂದಿನ ದಿನಗಳಲ್ಲಿ ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಇದರ ಜೊತೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯು ಕೈಗಾರಿಕಾಧ್ಯಮಿಗಳ ಬೇಡಿಕೆಗೆ ಅನುಗುಣವಾದ ಪಠ್ಯಕ್ರಮ ರೂಪಿಸಿ ಇಂಜಿನಿಯರಿಂಗ್ ಪದವೀಧರರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಲು ಅನುವಾಗುವಂತಹ ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಇಂದು ನಡೆದ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಸರ್ಕಾರವು ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಆಸರೆಯಾಗಲು ಈ ಉಚಿತ ಲ್ಯಾಪ್ಟಾಪ್ ಘೋಷಣೆ ಮಾಡಿದೆ.
ಶೀಘ್ರದಲ್ಲಿಯೇ ಇದಕ್ಕೆ ಅರ್ಜಿ ಸಲ್ಲಿಸುವ ವಿಧಾನವನ್ನು ಕೂಡ ಸರ್ಕಾರ ತಿಳಿಸಲಿದೆ, ಅಷ್ಟರೊಳಗೆ ಫಲಾನುಭವಿಗಳಾಗಲು ಅರ್ಹತೆ ಇರುವ ವಿದ್ಯಾರ್ಥಿಗಳು ಇದಕ್ಕೆ ಪೂರಕವಾಗಿ ಕೇಳಲಾಗುವ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವುದು ಉತ್ತಮ. ಹಾಗಾಗಿ ಇಂತಹ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.