10ನೇ ತರಗತಿ ಹಾಗೂ ಐ ಟಿ ಐ ಪಾಸ್ ಆದಂತಹ ಅಭ್ಯರ್ಥಿಗಳಿಗೆ 2023ರಲ್ಲಿ ಹೊಸ ನೇಮಕಾತಿಗೆ ಅರ್ಜಿ ಪ್ರಾರಂಭ ಮಾಡಿದ್ದು ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈಸ್ಟ್ ಸೆಂಟ್ರಲ್ ರೈಲ್ವೆ ನೇಮಕಾತಿ 2023 ಹೊಸ ನೇಮಕಾತಿಗೆ ಅರ್ಜಿ ಪ್ರಾರಂಭ ಮಾಡಿದ್ದಾರೆ.
ಹಾಗಾದರೆ ಈ ಅರ್ಜಿ ಹಾಕುವುದಕ್ಕೆ ಯಾರೆಲ್ಲ ಅರ್ಹರು ಹಾಗೂ ಈ ಅರ್ಜಿ ಹಾಕುವುದಕ್ಕೆ ಯಾವುದೆಲ್ಲ ದಾಖಲಾತಿಗಳು ಬೇಕಾಗುತ್ತದೆ ಅರ್ಜಿ ಹಾಕಲು ಪ್ರಾರಂಭ ದಿನಾಂಕ ಯಾವುದು ಹಾಗೂ ಕೊನೆಯ ದಿನಾಂಕ ಯಾವುದು ಹಾಗೂ ಯಾರೆಲ್ಲ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಎನ್ನುವಂತಹ ಸಂಪೂರ್ಣವಾದ ಮಾಹಿತಿಯನ್ನು ಈ ದಿನ ತಿಳಿಯೋಣ.
ಮೊದಲನೆಯದಾಗಿ ಈ ಅರ್ಜಿ ಹಾಕುವುದಕ್ಕೆ ವಯೋಮಿತಿ ಎಷ್ಟಿರಬೇಕಾಗುತ್ತದೆ ಎಂದು ನೋಡುವುದಾದರೆ. ಕನಿಷ್ಠ 14 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 24 ವರ್ಷ ವಯಸ್ಸಿನ ಒಳಗಿನವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರುವಂತದ್ದು ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಹಾಗೆಯೇ PWD ಅಭ್ಯರ್ಥಿಗಳಿಗೆ ಸರಿಸುಮಾರು 10 ವರ್ಷ ಸಡಿಲಿಕೆ ಇದೆ.
ಆಯ್ಕೆಯ ವಿಧಾನ ನೋಡುವುದಾದರೆ :-
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :-
ಮಹಿಳಾ / ಎಸ್ ಸಿ / ಎಸ್ ಟಿ / PWD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಉಳಿದ ಅಭ್ಯರ್ಥಿಗಳು 100 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಶುಲ್ಕ ಪಾವತಿಸುವ ವಿಧಾನ : –
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ : –
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳ ಸಂಖ್ಯೆ :-
ಒಟ್ಟಾರೆಯಾಗಿ 1832 ಹುದ್ದೆಗಳಿಗೆ ಈಗ ಅರ್ಜಿ ಪ್ರಾರಂಭ ಮಾಡಿದ್ದಾರೆ.
ವಿದ್ಯಾರ್ಹತೆ : –
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಜೊತೆಗೆ ಆಯಾ ಟ್ರೇಡ್ ಗಳಲ್ಲಿ ಐಟಿಐ ಕೋರ್ಸ್ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕ : –
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 10/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09/12/2023
ಇತರೆ ಮಾಹಿತಿ : –
ಈಸ್ಟ್ ಸೆಂಟ್ರಲ್ ರೈಲ್ವೆ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಮೆಕ್ಯಾನಿಕ್ (ಡೀಸೆಲ್ ), ರೆಫ್ರಿಜರೇಷನ್ & ಎಸಿ ಮೆಕ್ಯಾನಿಕ್, ಕಾರ್ಪೆಂಟರ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ಪೇಂಟರ್ (ಜನರಲ್), ಇಸ್ಟ್ರಿಷಿಯನ್, ವಯ ಮನ್, ಟರ್ನರ್, ಮಶಿನಿಸ್ಟ್, ಬ್ಲಾಕ್ ಸ್ಮಿತ್, ಲ್ಯಾಬೋರೇಟರಿ ಅಸಿಸ್ಟೆಂಟ್ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.
ಈ ಮೇಲೆ ಹೇಳಿದೆ ಇಷ್ಟು ಮಾಹಿತಿಗಳನ್ನು ತಿಳಿದ ನಂತರ ಪ್ರತಿಯೊಬ್ಬರೂ ಕೂಡ ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ನೀವು ಕೂಡ ಈ ಹುದ್ದೆಯನ್ನು ಪಡೆದುಕೊಳ್ಳಬಹುದಾಗಿದೆ. ಅದರಲ್ಲೂ ಮೊದಲೇ ಹೇಳಿದಂತೆ ಯಾರು ಅತಿ ಹೆಚ್ಚು ಅಂಕಗಳನ್ನು ಪಡೆದುಕೊಂಡಿರುತ್ತಾರೋ ಅವರಿಗೆ ಮೊದಲ ಆದ್ಯತೆ ಇರುತ್ತದೆ.