ಮಾರ್ಚ್ 17 ರಂದು ನಮ್ಮ ಅಪ್ಪು ಅವರ ಹುಟ್ಟುಹಬ್ಬದ ಸಂಭ್ರಮದ ಸುದಿನ ಈ ದಿನದಂದು ಅಪ್ಪು ಕಟೌಟ್ ಗೆ ಹಾಲೆರೆದು ಸಂಭ್ರಮಿಸುತ್ತಿದ್ದ ಅಪ್ಪು ಅಭಿಮಾನಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಹೌದು ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಇನ್ಸ್ಪಿರೇಷನ್ ಡೇ ಅಥವಾ ಸ್ಫೂರ್ತಿಯ ದಿನವನ್ನಾಗಿ ಆಚರಿಸುವ ಮಹತ್ವದ ಭರವಸೆಯನ್ನು ನೀಡಿ ಅಪ್ಪು ಅವರ ವ್ಯಕ್ತಿತ್ವಕ್ಕೆ ಮನ್ನಣೆ ನೀಡಿ ಗೌರವಿಸಿದೆ.
ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಂದು ವೇಳೆ ನಿಮ್ಮ ಕೆಲಸ ಆಗದಿದ್ದಲ್ಲಿ ಹಣ ವಾಪಸ್ ಕೊಡುತ್ತಾರೆ 100% ಗ್ಯಾರಂಟಿ.
ಈ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ಸ್ಪಷ್ಟನೆ ನೀಡಿದ್ದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣ ಗುರು ಜಯಂತಿಯಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಅವರ ಮನವಿ ಮೇರೆಗೆ ಮಾರ್ಚ್ 17 ರಂದು ಸ್ಫೂರ್ತಿ ದಿನವನ್ನಾಗಿ ಆಚರಿಸಿ ಯುವ ಕಣ್ಮಣಿಗಳಿಗೆ ಕಣ್ಣಾಗಿರುವ ಅಪ್ಪು ಅವರ ವ್ಯಕ್ತಿತ್ವಕ್ಕೆ ಮನ್ನಣೆ ನೀಡಿದ್ದಾರೆ.
ಅಕ್ಟೋಬರ್ 29 ಬಂದರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನು ಅ.ಗ.ಲಿ ಒಂದು ವರ್ಷ ಪೂರ್ಣಗೊಳ್ಳಲಿದ್ದು ಆದರೆ ಅವರ ನೆನಪು ಮಾತ್ರ ಕಿಂಚಿತ್ತೂ ಮಾಸಿಲ್ಲ. ಕನ್ನಡಿಗರ ಮನೆ ಮನಗಳಲ್ಲಿ ಅವರು ಚಿರಸ್ಥಾಯಿಯಾಗಿ ನೆಲೆಸಿದ್ದಾರೆ. ವೈಯಕ್ತಿಕ ಹಾಗೂ ಸಾಮಾಜಿಕ ಕಾರ್ಯಗಳಿಂದಾಗಿ ದೇಶದೆಲ್ಲೆಡೆ ಅಪಾರ ಜನರ ಪ್ರೀತಿ ಗಳಿಸಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳಿಂದ ಗೌರವಗಳು ಮುಂದುವರೆದಿವೆ. ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ.
ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು. ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಪೂರ್ತಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಪುನೀತ್ ರಾಜಕುಮಾರ್ ಅವರು ಕೇವಲ ನಟನೆಯಲ್ಲಿ ಮಾತ್ರವಲ್ಲದೆ ನಿರ್ಮಾಪಕರಾಗಿ ಅನೇಕ ಯುವ ಪ್ರತಿಭೆಗಳಿಗೆ ಅವಕಾಶ ನೀಡಿದ್ದಲ್ಲದೆ ಅನೇಕ ಸಾಮಾಜಿಕ ಕೆಲಸ ಮತ್ತು ಸೇವೆಗಳನ್ನು ಮಾಡುವ ಮೂಲಕ ಕನ್ನಡಿಗರ ಮನೆ ಮನಗಳನ್ನು ತಲುಪಿದ್ದಾರೆ.
ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಅನೇಕರಿಗೆ ಮಾದರಿ ಆಗಿರುವ ಅಪ್ಪು ಅವರ ಮಾರ್ಗದರ್ಶನದಲ್ಲಿ ಅನೇಕ ಕಲಾವಿದರು ಬದುಕು ಕಟ್ಟಿಕೊಂಡಿದ್ದರು. ಆದರೆ, ಈಗ ಅಪ್ಪು ಇಲ್ಲ ಎಂಬ ನೋವು ಅನೇಕರನ್ನು ಬಹುವಾಗಿ ಕಾಡುತ್ತಿದ್ದು ಪುನೀತ್ ನಿಧನ ಹೊಂದಿ ಒಂದು ವರ್ಷ ಕಳೆಯುತ್ತಾ ಬಂದರೂ ಅವರ ಅಗಲಿಕೆಯ ನೋವು ಕಡಿಮೆ ಮಾತ್ರ ಆಗದೆ ಒಂದಲ್ಲಾ ಒಂದು ರೀತಿಯಲ್ಲಿ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿದೆ. ಇದೇ ರೀತಿ ಇವರ ಜನ್ಮದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸುವ ವಿಚಾರ ಕೂಡ ಈ ಸಾಲಿಗೆ ಸೇರಲಿದ್ದು ಅಪ್ಪು ಅವರಿಗೆ ಸಿಗುತ್ತಿರುವ ದೊಡ್ಡ ಮನ್ನಣೆ ಕೂಡ ಇದಾಗಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅಪ್ಪು ಜನ್ಮದಿನ, ಮಾರ್ಚ್ 17 ಇನ್ನುಮುಂದೆ ಸ್ಫೂರ್ತಿ ದಿನವೆಂದು ಆಚರಿಸುವ ಮೂಲಕ ನಾಡಿನ ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಲಿದೆ’ ಎಂದು ಕನ್ನಡ ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನಿಲ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಹೀಗೆ ಅಪ್ಪು ಅವರಿಗೆ ಒಂದರ ನಂತರ ಒಂದರಂತೆ ನೀಡುತ್ತಿರುವ ಗೌರವಗಳು ಅಪ್ಪು ಅಭಿಮಾನಿಗಳನ್ನು ಸಂತಸದ ಕಣ್ಣೀರು ಹಾಕುವಂತೆ ಮಾಡುತ್ತಿವೆ.