ನ್ಯಾಯಾಲಯಗಳಲ್ಲಿ ಕೆಲಸ ಮಾಡಲು ಬಯಸುವ ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ. ಕೊನೆವರೆಗೂ ಮಿಸ್ ಮಾಡದೇ ಓದಿ ನೀವೂ ಅರ್ಜಿ ಸಲ್ಲಿಸಿ…
* ಉದ್ಯೋಗ ಸಂಸ್ಥೆ: ಜಿಲ್ಲಾ ನ್ಯಾಯಾಲಯ
* ಉದ್ಯೋಗ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.
* ಹುದ್ದೆ ಹೆಸರು: ಶೀಘ್ರ ಲಿಪಿಗಾರರು
* ಖಾಲಿಯಿರುವ ಒಟ್ಟು ಹುದ್ದೆಗಳ ಸಂಖ್ಯೆ: 13
ವೇತನ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 27,650 ರೂ. ರಿಂದ 52,650 ರೂ. ಮಾಸಿಕ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ :
• ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
• ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸಿನಿಯರ್ ಗ್ರೇಡ್) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
* ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ವಿಧಾನ
ಶೀಘ್ರಲಿಪಿಗಾರರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿ ಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಗಳ ಸರಾಸರಿ ಆಧಾರದ ಮೇಲೆ ಮೆರಿಟ್‌ವೈಸ್ (Merit wise) 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ
* ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ ಅಭ್ಯರ್ಥಿಗಳು – 300 ರೂ.
* ಎಸ್ಸಿ, ಎಸ್ಟಿ, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ
* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 21, 2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2023
* ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 24, 2023