ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆ ದಿನಾಂಕ ಫಿಕ್ಸ್.! ಆದರೆ ಈ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಹಣ ಜಮೆ ಆಗುವುದಿಲ್ಲ.!

 

ಕರ್ನಾಟಕ ರಾಜ್ಯದ ಗ್ಯಾರಂಟಿ ಕಾರ್ಡ್ (Guarantee Scheme) ಯೋಜನೆಗಳ ಪೈಕಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ಲಾಂಚ್ ಆಗುತ್ತಿದೆ. ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಯೋಜನೆ ಹಣ ವರ್ಗಾವಣೆಯಾಗುವ ದಿನಾಂಕವನ್ನು ಮುಂದೂಡಲಾಗಿದೆ. ಅಂತಿಮವಾಗಿ ಆಗಸ್ಟ್ 30ರಂದು ಮೈಸೂರಿನಲ್ಲಿ ಕಾರ್ಯಕ್ರಮ ನಡೆಸಿ ಗೃಹಲಕ್ಷ್ಮಿ ಯೋಜನೆ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುವುದು ಎನ್ನುವ ನಿಖರವಾದ ಮಾಹಿತಿಯನ್ನು ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ.

ಜುಲೈ 19 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ಆರಂಭವಾಗಿತ್ತು ರೇಷನ್ ಕಾರ್ಡ್ ಹೊಂದಿರುವ ಹಾಗೂ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಎಲ್ಲಾ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಯಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆ ಬಗ್ಗೆ ಘೋಷಣೆ ಮಾಡಿದಾಗ ಕುಟುಂಬ ನಿರ್ವಹಣೆಗಾಗಿ ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಗೂ ಕೂಡ ಸಹಾಯಧನವನ್ನು ನೀಡಲಾಗುತ್ತದೆ ಎಂದು ಹೇಳಲಾಗಿತ್ತು.

6 ವರ್ಷಗಳ ಕಿಚ್ಚ-ದಚ್ಚು ಮನಸ್ತಾಪಕ್ಕೆ ತೆರೆ ಎಳೆದರಾ ಸುಮಲತಾ ಅಂಬರೀಶ್.! ಕೊನೆಗೂ ಒಂದಾದ್ರು ಕುಚಿಕೋ ಗೆಳೆಯರು.!

ಆದರೆ ಈಗ ಸರ್ಕಾರಕ್ಕೆ ಆರ್ಥಿಕ ಹೊರೆ ಹೆಚ್ಚಾಗುತ್ತದೆ ಎನ್ನುವ ಕಾರಣಕ್ಕಾಗಿ ಕೆಲವು ವರ್ಗದ ಮಹಿಳೆಯರನ್ನು ಈ ಪಟ್ಟಿಯಿಂದ ಕೈ ಬಿಡಲಾಗುತ್ತಿದ್ದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಇದುವರೆಗೆ ಆಗಸ್ಟ್ 30ನೇ ತಾರೀಖಿನಂದು ಕರ್ನಾಟಕದ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಲಿದೆ ಅದು ಕೂಡ ಆಲ್ಫಬೇಟಿಕ್ (Alphabetic) ಮಾದರಿಯಲ್ಲಿ ಹಂತ ಹಂತವಾಗಿ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಆದರೆ ಇತ್ತೀಚಿಗೆ ಬಂದ ಮಾಹಿತಿ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಎಲ್ಲಾ ಮಹಿಳೆಯರು ಕೂಡ ಸಹಾಯಧನ ಪಡೆಯುವುದಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾದರೆ ಯಾರೆಲ್ಲಾ ಈ ಯೋಜನೆಯಿಂದ ವಂಚಿತರಾಗುತ್ತಾರೆ ಎನ್ನುವ ಪಟ್ಟಿ ಇಲ್ಲಿದೆ ನೋಡಿ.

ಕೇಂದ್ರ ಸರ್ಕಾರದಿಂದ ಪುರುಷರಿಗೆ ಬಂಪರ್ ಯೋಜನೆ ಘೋಷಣೆ.!

● 2 ಹೆಕ್ಟರ್ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿರುವ ಕುಟುಂಬಗಳ ಮಹಿಳೆಯರು
● ವೈಟ್ ಬೋರ್ಡ್ ಕಾರ್ ಅಥವಾ ನಾಲ್ಕು ಚಕ್ರದ ವಾಹನ ಹೊಂದಿರುವ ಕುಟುಂಬದ ಮಹಿಳೆಯರು
● ಆದಾಯ ತೆರಿಗೆ, ವೃತ್ತಿ ತೆರಿಗೆ GST ರಿಟರ್ನ್ಸ್ ಸಲ್ಲಿಸುವ ಕುಟುಂಬದ ಮಹಿಳೆಯರು
● ಸರ್ಕಾರಿ ಹುದ್ದೆ ಹೊಂದಿರುವ ಹಾಗೂ ಪಿಂಚಣಿ ಪಡೆಯುತ್ತಿರುವ ಕುಟುಂಬದ ಮಹಿಳೆಯರು
● BPL ರೇಷನ್ ಕಾರ್ಡ್ ಹೊಂದಿರದ ಕುಟುಂಬದ ಮಹಿಳೆಯರು
● ಆಶಾ ಕಾರ್ಯಕರ್ತೆಯ ಮತ್ತು ಅಂಗನವಾಡಿ ಕಾರ್ಯಕರ್ತೆಯರು

ಈ ಮೇಲೆ ತಿಳಿಸಿದ ಪಟ್ಟಿಯಲ್ಲಿ ಇರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಸಹಾಯಧನವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು ಕೂಡ ಅರ್ಜಿ ಸಲ್ಲಿಸುವ ವೇಳೆ ಬ್ಯಾಂಕ್ ಖಾತೆ ಮಾಹಿತಿ ಪಡೆಯದ ಕಾರಣ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.

ಶ್ರೀ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನೇಮಕಾತಿ 2023, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

ಹಾಗಾಗಿ ಯಾವೆಲ್ಲ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಲಿಂಕ್ ಮತ್ತು NPCI ಮ್ಯಾಪಿಂಗ್ (Aadhar link NPCI Mapping) ಮಾಡಿರುವುದಿಲ್ಲ ಆ ಮಹಿಳೆಯರು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಲು ಅರ್ಹತೆ ಇದ್ದರೂ ಕೂಡ ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಈ ಕೂಡಲೇ ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿ NPCI ಮ್ಯಾಪಿಂಗ್ ಆಗಿದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ.

Leave a Comment