ಕಾಂಗ್ರೆಸ್ ಪಕ್ಷವು ಈ ಬಾರಿ ಚುನಾವಣೆ ಪ್ರಚಾರದ ಮೇಲೆ ಐದು ಗ್ಯಾರಂಟಿ ಕಾರ್ಡ್ ಗಳನ್ನು ಘೋಷಿಸಿತ್ತು. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಈಗ ಕಾಂಗ್ರೆಸ್ ಪಕ್ಷವು ಗೆದ್ದು ಸರ್ಕಾರ ಸ್ಥಾಪಿಸಿರುವುದರಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲೇ ಬೇಕಾಗಿದೆ. ಮುಖ್ಯಮಂತ್ರಿಗಳು ಕೂಡ ಮೊದಲ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚಿಸಿ ತಾತ್ವಿಕ ಅನುಮೋದನೆಯನ್ನು ನೀಡಿದ್ದಾರೆ.
ಆ ಪ್ರಕಾರವಾಗಿ ಗೃಹಲಕ್ಷ್ಮಿ ಯೋಜನೆ ಅಡಿ ಇನ್ನು ಮುಂದೆ ಪ್ರತಿ ತಿಂಗಳು ಮನೆಯ ಯಜಮಾನಿಗೆ 2,000 ರೂ.ಗಳನ್ನು ಮನೆ ನಿರ್ವಹಣೆ ಖರ್ಚಿಗಾಗಿ ನೀಡಿ ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡುವ ಹಾಗೂ ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುವಂತಹ ಕೆಲಸವನ್ನು ಮಾಡಲು ಕಾಂಗ್ರೆಸ್ ಸರ್ಕಾರವು ನಿರ್ಧರಿಸಿದೆ. ಈ ಅಂಕಣದಲ್ಲಿ ಈ ಯೋಜನೆ ಪ್ರಯೋಜನಗಳನ್ನು ಪಡೆಯಲು ಇರುವ ಮಾರ್ಗಸೂಚಿಗಳು ಹಾಗೂ ಮಾನದಂಡಗಳು ಏನು ಎನ್ನುವುದರ ಬಗ್ಗೆ ತಿಳಿಸುತ್ತಿದ್ದೇವೆ.
ಜಾತಿ ಮತ್ತು ಧಾರ್ಮಿಕ ಬೇದಭಾವ ಇಲ್ಲದೆ ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ. ಈ ಯೋಜನೆಯಲ್ಲಿ ಮಹಿಳೆಯರಿಗೆ 2000 ಸಹಾಯಧನ ನೀಡುವ ಮೂಲಕ ಲಿಂಗಸಮಾನತೆಯನ್ನು ಎತ್ತಿ ಹಿಡಿಯಲು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಇದರಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ.
ಮಕ್ಕಳ ಶಿಕ್ಷಣ ವೆಚ್ಚಕ್ಕೆ ಅಥವಾ ಪೌಷ್ಟಿಕಾಂಶ ಆಹಾರಯುಕ್ತ ಆಹಾರ ನೀಡಲು ಈ ಹಣ ಸಹಾಯಕ್ಕೆ ಬರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಲೆ ಏರಿಕೆ ಆಗಿರುವುದರಿಂದ ಮನೆ ಒಡತಿಗೆ ಮನೆಯ ಖರ್ಚು ವೆಚ್ಚಕ್ಕೆ ಈ ಸಹಾಯಧನ ಸಹಾಯಕ್ಕೆ ಬರಲಿದೆ. ಮುಂದಿನ ತಿಂಗಳಿನಿಂದಲೇ ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 10 ನೇ ತಾರೀಖಿನ ಒಳಗೆ ನೇರವಾಗಿ ಈ ಹಣ ವರ್ಗಾವಣೆ ಆಗಲಿದೆ ಎನ್ನುವುದನ್ನು ಸರ್ಕಾರ ಹೇಳಿದೆ.
ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಪಡೆಯಲು ಇರುವ ಮಾನದಂಡಗಳು:-
● ಹೆಣ್ಣು ಮಕ್ಕಳು ಕರ್ನಾಟಕ ರಾಜ್ಯದವರಾಗಿರಬೇಕು.
● ವಿವಾಹಿತ ಮಹಿಳೆಯರು, ನಿರ್ಗತಿಕ ಮಹಿಳೆಯರು, ವಿಚ್ಛೇದಿತ ಮಹಿಳೆಯರು ಎಲ್ಲರೂ ಕೂಡ ಅರ್ಹರಾಗಿರುತ್ತಾರೆ.
● ಸರ್ಕಾರಿ ಉದ್ಯೋಗದಲ್ಲಿರುವ ಮಹಿಳೆಯರನ್ನು ಈ ಯೋಜನೆಗೆ ಸೇರಿಸಲಾಗುವುದಿಲ್ಲ.
● ಕುಟುಂಬದ ಆದಾಯವು 2 ಲಕ್ಷದ ಒಳಗೆ ಇರಬೇಕು.
●ಕರ್ನಾಟಕದ ಇತರ ಯಾವುದೇ ಕಲ್ಯಾಣ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು.
● ಒಂದು ಕುಟುಂಬದ ಒಬ್ಬ ಮಹಿಳೆಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
● ನಿಮ್ಮ ಬ್ಯಾಂಕ್ ಖಾತೆಯು NCPI ಗೆ ಒಳಪಟ್ಟಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು ಅಂದರೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಆಗಿರಬೇಕು ಇದನ್ನು ಆಧಾರ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಟ್ಟು ಖಚಿತಪಡಿಸಿಕೊಳ್ಳಬಹುದು.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
● ಕರ್ನಾಟಕದ ಶಾಶ್ವತ ನಿವಾಸಿ ಪುರಾವೆ
● ಆಧಾರ್ ಕಾರ್ಡ್
● ಜಾತಿ ಪ್ರಮಾಣ ಪತ್ರ
● ಆದಾಯ ಪ್ರಮಾಣ ಪತ್ರ
● ಸಕ್ರಿಯ ಮೊಬೈಲ್ ನಂಬರ್
● ಪಡಿತರ ಚೀಟಿ
● ಬ್ಯಾಂಕ್ ಖಾತೆ ವಿವರ
● ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
ಅರ್ಜಿ ಸಲ್ಲಿಸುವ ವಿಧಾನ:-
● ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಸೂಚಿಸಿದೆ. https://gruhalakshmi.gov.in. ವೆಬ್ಸೈಟ್ಗೆ ಭೇಟಿ ಕೊಡುವ ಮೂಲಕ ಅರ್ಜಿ ಸಲ್ಲಿಸಬಹುದು.
● ಈ ಮೇಲ್ಕಂಡ ಎಲ್ಲಾ ದಾಖಲೆಗಳ ಜೊತೆ ಹತ್ತಿರದ ಕರ್ನಾಟಕ ಒನ್ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು.
● ನಿಮ್ಮ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಛೇರಿಗೆ ಭೇಟಿ ಕೊಟ್ಟು ಅರ್ಜಿ ಫಾರಂ ಭರ್ತಿ ಮಾಡಿ ಈ ಎಲ್ಲ ದಾಖಲೆಗಳನ್ನು ಲಗತ್ತಿಸುವ ಮೂಲಕ ಅರ್ಜಿ ಸಲ್ಲಿಸಬಹುದು.
*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*