ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕು ಎಂದು ಬಯಸುವ ಎಲ್ಲಾ ಉದ್ಯೋಗಾಕಾಂಕ್ಷಿಗಳಿಗೂ ಕೂಡ HDFC ಬ್ಯಾಂಕ್ ವತಿಯಿಂದ ಸಿಹಿ ಸುದ್ದಿ ಇದೆ. HDFC (HDFC Recruitments ) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ SSLC, PUC ಹಾಗೂ ಪದವಿ ವಿದ್ಯಾಭ್ಯಾಸ ಮುಗಿದಿರುವ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ.
ಭಾರತದಾದ್ಯಂತ ಇರುವ ಯಾವುದೇ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ HDFC ನೇಮಕಾತಿ ಕುರಿತು ಅಧಿಸೂಚನೆಯಲ್ಲಿರುವ ಕೆಲವು ಪ್ರಮುಖ ಅಂಶಗಳ ಬಗ್ಗೆ ಮಾಹಿತಿ ಹಂಚಿಕೊಳ್ಳುತ್ತೇವೆ. ಈ ಉಪಯುಕ್ತ ಮಾಹಿತಿಯನ್ನು ತಪ್ಪದೇ ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- HDFC
ಒಟ್ಟು ಹುದ್ದೆಗಳ ಸಂಖ್ಯೆ:- 14,510
ಹುದ್ದೆಗಳ ವಿವರ:-
* ಸಹಾಯಕ ವ್ಯವಸ್ಥಾಪಕ
* ಶಾಖಾ ವ್ಯವಸ್ಥಾಪಕ
* ವ್ಯಾಪಾರ ಅಭಿವೃದ್ಧಿ ವ್ಯವಸ್ಥಾಪಕ
* ಗುಮಾಸ್ತ
* ಸಂಗ್ರಹ ಅಧಿಕಾರಿ
* ಗ್ರಾಹಕ ಸಂಬಂಧ ವ್ಯವಸ್ಥಾಪಕ
* ಗ್ರಾಹಕ ಸೇವಾ ಕಾರ್ಯನಿರ್ವಾಹಕ
* ಹಣಕಾಸು ವ್ಯವಸ್ಥಾಪಕರು
* ಪ್ರಧಾನ ವ್ಯವಸ್ಥಾಪಕರು
* ಮ್ಯಾನೇಜರ್
* ಸಹಾಯಕ
* ಚಾಲಕ
* ಪ್ಯೂನ್
* ಕಾರ್ಯಾಚರಣೆ ಮುಖ್ಯಸ್ಥ
* ನಿಷೇಧಿತ ಅಧಿಕಾರಿ
* ರಿಕವರಿ ಅಧಿಕಾರಿ
* ಸಂಬಂಧ ವ್ಯವಸ್ಥಾಪಕ
* ಪರಿಣಿತ ಅಧಿಕಾರಿ
* ನೆಟ್ ವರ್ಕ್ ಇಂಜಿನಿಯರ್
ಉದ್ಯೋಗ ಸ್ಥಳ:- ಭಾರತದಾದ್ಯಂತ…
ವೇತನ ಶ್ರೇಣಿ:-
ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ HDFC ನಿಯಮಗಳ ಪ್ರಕಾರ ಆಕರ್ಷಣೀಯ ವೇತನ ಇರುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಭಾರತದಲ್ಲಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿ, 12ನೇ ತರಗತಿ, ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಫ್ರೆಶರ್ ಹಾಗೂ ಈಗಾಗಲೇ ಈ ಕ್ಷೇತ್ರದಲ್ಲಿ ಉದ್ಯೋಗ ಮಾಡಿ ಅನುಭವ ಉಳ್ಳವರು ಕೂಡ ಅರ್ಜಿ ಸಲ್ಲಿಸಬಹುದು.
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 40 ವರ್ಷಗಳು.
* HDFC ನಿಯಮಾನುಸಾರ ಕೆಲವು ವರ್ಗಗಳಿಗೆ ಮೀಸಲಾತಿ ಇರುತ್ತದೆ.
ಅರ್ಜಿ ಶುಲ್ಕ:- ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:-
* hdfcbank.com/personal/about-us/careers
ವೆಬ್ ಸೈಟ್ ಗೆ ಭೇಟಿ ಕೊಟ್ಟು ರಿಜಿಸ್ಟರ್ ಆಗಿ ನಂತರ ಅರ್ಜಿ ಸಲ್ಲಿಸಬೇಕು.
* ಅರ್ಜಿ ಫಾರಂನಲ್ಲಿ ಕೇಳಲಾಗುವ ಎಲ್ಲಾ ವೈಯಕ್ತಿಕ ಮಾಹಿತಿಗಳನ್ನು ಸರಿಯಾಗಿ ತುಂಬಿಸಬೇಕು ಮತ್ತು ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
* ಅರ್ಜಿ ಸಲ್ಲಿಕೆ ಯಶಸ್ವಿಯಾದ ಬಳಿಕ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು.
ಆಯ್ಕೆ ವಿಧಾನ:-
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 5 ಡಿಸೆಂಬರ್, 2022
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20 ಜನವರಿ, 2023.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಮತ್ತು ಇಮೇಲ್ ಐಡಿ
* ಆಧಾರ್ ಕಾರ್ಡ್
* ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಈಗಾಗಲೇ ಕೆಲಸದ ಅನುಭವ ಹೊಂದಿದ್ದರೆ ಅದಕ್ಕೆ ಸಂಬಂಧಿಸಿದ ದಾಖಲೆಗಳು.
* ಇನ್ನಿತರ ಯಾವುದೇ ಮೀಸಲಾತಿಗೆ ಸಂಬಂಧಿಸಿದ ದಾಖಲೆಗಳು.