ದೇಶದಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದ್ದಂತೆ ಕುಟುಂಬಗಳು ಹೆಚ್ಚಾಗುತ್ತಿವೆ, ಇದರ ಜೊತೆಗೆ ರೇಷನ್ ಕಾರ್ಡ್ ಗಳ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ದೇಶದ ಎಲ್ಲಾ ಕುಟುಂಬಗಳಿಗೂ ಕೂಡ ಉಚಿತ ಪಡಿತರದ ಅವಶ್ಯಕತೆ ಇರುವುದರಿಂದ ರೇಷನ್ ಕಾರ್ಡ್ ಮೂಲಕ ಅವರಿಗೆ ಈ ಅನುಕೂಲತೆಯನ್ನು ಮಾಡಿಕೊಡಲಾಗುತ್ತಿದೆ. ರೇಷನ್ ಕಾರ್ಡ್ ಸಂಖ್ಯೆ ಹೆಚ್ಚಾದಂತೆ ಹೆಚ್ಚಿನ ನ್ಯಾಯಬೆಲೆ ಅಂಗಡಿಗಳ ವ್ಯವಸ್ಥೆಯನ್ನು ಕೂಡ ಸರ್ಕಾರ ಮಾಡಬೇಕಾಗುತ್ತದೆ.
ಈ ಅವಶ್ಯಕತೆಯನ್ನು ಅರಿತು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪಡಿತರ ಚೀಟಿದಾರರ ಹಿತದೃಷ್ಠಿ ಹಾಗೂ ಸಾರ್ವಜನಿಕ ವಿತರಣಾ ವ್ಯವಸ್ಥೆ ಪರಿಣಾಮಕಾರಿಗೊಳಿಸುವ ದೃಷ್ಟಿಯಿಂದ ಈಗ ಹೊಸ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸದ್ಯಕ್ಕೆ ಈಗ ರಾಜ್ಯದಲ್ಲಿ ಭರಮಸಾಗರ ಗೊಲ್ಲರಹಟ್ಟಿ ಗ್ರಾಮದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ ಮಾಡಿದೆ. ಇಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಸಲ್ಲಿಸುವುದಕ್ಕೆ ಜುಲೈ 4 ಕೊನೆಯ ದಿನವಾಗಿದೆ. ಈ ಭರಮಸಾಗರ ಗೊಲ್ಲರಹಟ್ಟಿ ಗ್ರಾಮದಲ್ಲಿ 5 AAY, 170 BPL ಮತ್ತು 2 APL ಸೇರಿದಂತೆ ಒಟ್ಟು 177 ಪಡಿತರ ಚೀಟಿಗಳಿವೆ.
ಇಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ತೆರೆಯಲು ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಇಲಾಖೆಯು ಇದಕ್ಕಾಗಿ ವಿಧಿಸಿರುವ ಅರ್ಹತೆಗಳನ್ನು ಹೊಂದಿರುವ ಆಸಕ್ತರು ಪೂರಕ ದಾಖಲೆಗಳ ಜೊತೆ ಅರ್ಜಿ ಫಾರಂ ತುಂಬಿ ಈ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಸಲ್ಲಿಸಬಹುದು. ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗಾಗಿ ಅರ್ಜಿ ಸಲ್ಲಿಸಲು ಸೂಚಿಸಿದೆ.
ಜೂನ್ 4 ರಂದು ಇದಕ್ಕೆ ಸಂಬಂಧಿಸಿದ ಪ್ರಕಟಣೆ ಹೊರ ಬಿದ್ದಿದ್ದ ಕಾರಣ ಈಗ 30 ದಿನದ ಒಳಗೆ ಅಂದರೆ ಅಂದರೆ ಜುಲೈ 4 ರ ಒಳಗಾಗಿ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಿಲ್ಲಾಧಿಕಾರಿಗಳ ಕಚೇರಿ ಸಂಕಿರ್ಣ, ಚಿತ್ರದುರ್ಗ ಇವರಿಗೆ ಈ ಅರ್ಜಿಯನ್ನು ಸಲ್ಲಿಸಬೇಕು.
ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎನ್ನುವುದನ್ನು ಇದಕ್ಕಾಗಿ ಇಲಾಖೆ ಹೊರಡಿಸಿದ್ದ ಪ್ರಕಟಣೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇದಕ್ಕಾಗಿ ದಾಖಲೆಗಳ ಜೊತೆ ಸಲ್ಲಿಸಬೇಕಾದ ನಿಗಧಿತ ಅರ್ಜಿ ಫಾರಂ-ಎ ಅನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕಿರ್ಣ, ಚಿತ್ರದುರ್ಗ ಹಾಗೂ ಚಿತ್ರದುರ್ಗ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಪಡೆಯಬಹುದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಆದ್ದರಿಂದ ಅಲ್ಲಿನ ಭಾಗದ ಯುವ ಜನತೆಗೆ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಹೊಸ ನ್ಯಾಯಬೆಲೆ ಅಂಗಡಿಯನ್ನು ತೆರೆಯುವ ಲೈಸೆನ್ಸ್ ಪಡೆದುಕೊಳ್ಳಲು ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ವಿವರವನ್ನು ಹಂಚಿಕೊಳ್ಳುತ್ತಿದ್ದೇವೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಳ್ಳಿ, ಆ ಭಾಗದ ಜನತೆಗೆ ಮಾಹಿತಿಯು ತಲುಪುವಂತೆ ಮಾಡಿ. ಈ ವಿಷಯದ ಕುರಿತು ಹೆಚ್ಚಿನ ಮಾಹಿತಿ ಬೇಕಾದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಅಲ್ಲಿ ಮಾಹಿತಿ ಪಡೆದುಕೊಳ್ಳಿ ಅಥವಾ ಇಲಾಖೆಯ ಕಛೇರಿಯನ್ನು ಸಂಪರ್ಕಿಸಿ.