ಕರ್ನಾಟಕದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಯಾಕೆಂದರೆ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಕರ್ನಾಟಕ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಈ ಬಾರಿ ಬೃಹತ್ ನೇಮಕಾತಿ ನಡೆಯುತ್ತಿದ್ದು ಸುಮಾರು 2,500ಕ್ಕೂ ಹೆಚ್ಚು ಆಕಾಂಕ್ಷಿಗಳಿಗೆ ಉದ್ಯೋಗ ಸಿರುಗುವ ನಿರೀಕ್ಷೆ ಇದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಗೆ ಸಂಬಂಧಪಟ್ಟ ಅಧಿಸೂಚನೆಯನ್ನು ಸಹ ಇಲಾಖೆ ಹೊರಡಿಸಿದ್ದು, ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಡುವ ಮೂಲಕ ನೀವು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಈ ಅಂಕಣದಲ್ಲಿಯೂ ಸಹ ಅಧಿಸೂಚನೆಯಲ್ಲಿರುವ ಕೆಲ ಪ್ರಮುಖ ಅಂಶಗಳ ಬಗ್ಗೆ ತಿಳಿಸುವ ಪ್ರಯತ್ನ ಮಾಡಲಾಗಿದೆ.
ಇಲಾಖೆ:- ಕರ್ನಾಟಕ ವಿದ್ಯುತ್ ಇಲಾಖೆ.
ಸಂಸ್ಥೆ:- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL).
ಉದ್ಯೋಗ ಸ್ಥಳ:- ಬೆಂಗಳೂರು.
ಹುದ್ದೆಗಳ ಸಂಖ್ಯೆ:- 2618
ಹುದ್ದೆಗಳ ವಿವರ:-
● ಮ್ಯಾನೇಜರ್
● ಡಿಪ್ಯೂಟಿ ಮ್ಯಾನೇಜರ್
ವೇತನ ಶ್ರೇಣಿ:-
● ಮ್ಯಾನೇಜರ್ – 70,000 ದಿಂದ 2,00,000.
● ಡಿಪ್ಯೂಟಿ ಮ್ಯಾನೇಜರ್ – 60,000 ದಿಂದ 1,80,000.
ವಯೋಮಿತಿ:-
● 01.04.2023 ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು.
● ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ 43 ವರ್ಷಗಳು.
● ಡಿಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಗರಿಷ್ಠ 39 ವರ್ಷಗಳು.
ವಯೋಮಿತಿ ಸಡಿಲಿಕೆ:-
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು.
● OBC ಅಭ್ಯರ್ಥಿಗಳಿಗೆ 3 ವರ್ಷಗಳು.
ಅರ್ಜಿ ಶುಲ್ಕ:-
● ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೂ ಕೂಡ 708ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
● ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು.
ಆಯ್ಕೆ ಪ್ರಕ್ರಿಯೆ:-
● ಲಿಖಿತ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ
ಶೈಕ್ಷಣಿಕ ವಿದ್ಯಾರ್ಹತೆ:-
● BEL ಪ್ರಕಾರ ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ BE, B.TECH ಉತ್ತೀರ್ಣರಾಗಿರಬೇಕು.
● ಹುದ್ದೆಗೆ ಅನುಸಾರವಾಗಿ ಪದವಿ ಮತ್ತು ಡಿಪ್ಲೋಮಾ ಪಾಸ್ ಆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ:- ಆಫ್ ಲೈನ್ ಮೂಲಕ
● ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಟ್ಟು ಅರ್ಜಿ ಫಾರಂ ಅನ್ನು ಭರ್ತಿ ಮಾಡಬೇಕು.
● ಅರ್ಜಿ ಫಾರಂನಲ್ಲಿ ನಿಮ್ಮ ಹೆಸರು, ವಿಳಾಸ, ತಂದೆ ಹೆಸರು, ಹುಟ್ಟಿದ ದಿನಾಂಕ ಸೇರಿದಂತೆ ನೀವು ಅರ್ಜಿ ಸಲ್ಲಿಸುವ ಹುದ್ದೆಯ ಆಯ್ಕೆ ನಿಮ್ಮಸಹಿ ಮತ್ತು ಇತ್ತೀಚಿನ ಭಾವಚಿತ್ರ ಕೂಡ ಕೇಳಲಾಗಿರುತ್ತದೆ.
● ಇವುಗಳನ್ನು ಭರ್ತಿ ಮಾಡಿ ನಿಮ್ಮ ರೆಸ್ಯೂಮ್ ಜೊತೆ ಮತ್ತು ಅರ್ಜಿ ಶುಲ್ಕ ಪಾವತಿ ಮಾಡಿರುವ ರಸಿದಿ ಸೇರಿಸಿ ಅಂಚೆ ಲಕೋಟೆ ಮೂಲಕ ಭಾರತ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಛೇರಿ ಅಡ್ರೆಸ್ ಗೆ ಕಳುಹಿಸಬೇಕು.
● ಕಛೇರಿ ವಿಳಾಸ:-
ಜನರಲ್ ಮ್ಯಾನೇಜರ್ (HR&A),
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ 405,
ಇಂಡಸ್ಟ್ರಿಯಲ್ ಏರಿಯಾ ಹಂತ-3,
ಪಂಚಕುಲ, ಹರಿಯಾಣ – 134113.
● ವೆಬ್ ಸೈಟ್ ವಿಳಾಸ – @bel-india.in
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 25.04.2023.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 20.05.2023.