10ನೇ ತರಗತಿ ಹಾಗೂ ಪಿಯುಸಿ ಪಾಸ್ ಆದ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೀಘ್ರ ಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಮತ್ತು ಜವಾನ್ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಬಗ್ಗೆ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ.
ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ
ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷವನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷವನ್ನು ನಿಗದಿಪಡಿಸಲಾಗಿದೆ. 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷವನ್ನು ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಇದಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷವನ್ನು ನಿಗದಿಪಡಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 25.03.2023ರವರೆಗೆ ಅವಕಾಶವಿರುತ್ತದೆ. ವೇತನ : ಶೀಘ್ರ ಲಿಪಿಗಾರರು ರೂಪಾಯಿ 27,650 ರಿಂದ 52,650 ಗಳನ್ನು ಪಡೆಯಬಹುದು. ಬೆರಳಚ್ಚುಗಾರು ಮತ್ತು ಬೆರಳಚ್ಚು ನಕಲುಗಾರರು 21,400 ಗಳಿಂದ 42,000 ರೂಪಾಯಿಗಳವರೆಗೆ ಪಡೆಯಬಹುದು. ಆದೇಶ ಜಾರಿಕಾರರು ರೂಪಾಯಿ 19,950 ರಿಂದ 37,900ರ ವರೆಗೆ ಮತ್ತು ಜವಾನರು 17,000 ದಿಂದ 28,950 ರೂಪಾಯಿಗಳವರೆಗೆ ಪಡೆಯಬಹುದಾಗಿದೆ.
ಆಯ್ಕೆ ವಿಧಾನ :
• ಶೀಘ್ರ ಲಿಪಿಕಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಶೇಕಡವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆಯನ್ನು ಮಾಡಲಾಗುವುದು.
• ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಗಳಿಸಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ಸಂದರ್ಶನವನ್ನು ಮಾಡಿ ಆಯ್ಕೆ ಮಾಡಲಾಗುವುದು.
ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ ರೂಪಾಯಿ 200 ಅನ್ನು ಅರ್ಜಿ ಶುಲ್ಕವಾಗಿ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಕೆ ಸೇರಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕಗಳಿರುವುದಿಲ್ಲ. ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ನೆಟ್ ಮಾರ್ಕೆಟಿಂಗ್ ಗಳ ಮೂಲಕ ಶುಲ್ಕವನ್ನು ಪಾವತಿಸಬಹುದು. ಜಿಲ್ಲಾ ನ್ಯಾಯಾಲಯದ ವೆಬ್ಸೈಟ್ನಿಂದ ಚಲನ್ ಪ್ರಿಂಟ್ ತೆಗೆದು, ಎಸ್ ಬಿ ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್ಸೈಟ್ನ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಖಾಲಿ ಇರುವ ಬಟ್ಟು ಹುದ್ದೆಗಳ ಸಂಖ್ಯೆ 60. ಎಂಟು ಶೀಘ್ರ ಲಿಪಿಕಾರರು, 9 ಬೆರಳಚ್ಚುಗಾರರು, ಒಂದು ಬೆರಳಚ್ಚು ನಕಲುಗಾರು, 13 ಆದೇಶ ಜಾರಿಕಾರರು ಮತ್ತು 29 ಜವಾನರ ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ : ಶೀಘ್ರ ಲಿಪಿಕಾರ ಹುದ್ದೆಗೆ ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಯಲ್ಲಿ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯ ನಡೆಸುವ ಕನ್ನಡ ಮತ್ತು ಆಂಗ್ಲ ಶೀಘ್ರ ಲಿಪಿ ಪರೀಕ್ಷೆಯಲ್ಲಿ ಮತ್ತು ಬೆರಳಚ್ಚು (ಸೀನಿಯರ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು(ಸೀನಿಯರ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಜಿ ಸಲ್ಲಿಸಲು, ಪಿಯುಸಿ ಪಾಸ್ ಆಗಿರಬೇಕು ಜೊತೆಗೆ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು (ಜೂನಿಯರ್) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ಎಸ್ಎಲ್ಸಿ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸನ್ಸ್ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ಜವನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಸ್ಎಸ್ಎಲ್ಸಿ ಪಾಸ್ ಆಗಿರಬೇಕು ಜೊತೆಯಲ್ಲಿ ಕನ್ನಡವನ್ನು ಓದಲು ಮತ್ತು ಬರೆಯಲು ಕಲಿತಿರಬೇಕು.