Sunday, May 28, 2023
HomeJob Newsಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ:- 35,000 - 82,660...

ಮೆಟ್ರೋದಲ್ಲಿ ವಿವಿಧ ಹುದ್ದೆಗಳ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ:- 35,000 – 82,660 ರ ವರೆಗೆ ಪಡೆಯಬಹುದು.

 

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸಂಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಈಗ ಸಕಾಲ. ಕೇಂದ್ರ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಜಂಟಿಯಾಗಿ ನಿರ್ವಹಣೆ ಮಾಡುತ್ತಿರುವ ಈ BMRCL ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಐದು ವರ್ಷಗಳ ಕಾಲ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಸಂಸ್ಥೆಯು ಅರ್ಜಿ ಆಹ್ವಾನ ಮಾಡಿದೆ.

BMRCL ಸಂಸ್ಥೆ ವತಿಯಿಂದಲೇ ಈ ಕುರಿತು ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದ್ದು, ಬೆಂಗಳೂರಿನಲ್ಲಿ ಮೆಟ್ರೋ ಕಾರ್ಯ ನಡೆಯುತ್ತಿರುವುದರಿಂದ ಇದೇ ಸಂಬಂಧ ಈ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎನ್ನುವುದನ್ನು ಕೂಡ ಸ್ಪಷ್ಟವಾಗಿ ತಿಳಿಸಿದೆ. ಹಾಗಾಗಿ ಬೆಂಗಳೂರಿನಲ್ಲಿರುವ ಉದ್ಯೋಗ ಆಕಾಂಕ್ಷಿಗಳು ಅಥವಾ ಬೆಂಗಳೂರಿನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ಈ ಅಂಕಣದಲ್ಲಿ ಈಗ ಅರ್ಜಿ ಆಹ್ವಾನ ಮಾಡಲಾಗಿರುವ ಹುದ್ದೆಗಳ ಬಗ್ಗೆ ಕೆಲ ಪ್ರಮುಖ ಅಂಶಗಳನ್ನು ತಿಳಿಸಿಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಹುದ್ದೆಗಳ ವಿವರ, ಹುದ್ದೆಗಳ ಸಂಖ್ಯೆ, ವೇತನ ಶ್ರೇಣಿ, ವಯೋಮಿತಿ, ವಯೋಮಿತಿ ಸಡಿಲಿಕೆ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕಡೆ ದಿನಾಂಕ, ಉದ್ಯೋಗ ಸ್ಥಳ ಕುರಿತ ಮಾಹಿತಿಯನ್ನು ತಿಳಿದುಕೊಳ್ಳಲು ಅಂಕಣವನ್ನು ಪೂರ್ತಿಯಾಗಿ ಓದಿ.

ಇನ್ನು ಹೆಚ್ಚಿನ ಮಾಹಿತಿ ಬೇಕಾದಲ್ಲಿ BMRCL ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಮಾಹಿತಿಯನ್ನು ಪಡೆದುಕೊಳ್ಳಿ ಮತ್ತು ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಕೂಡ ಹಂಚಿಕೊಳ್ಳಿ.

ಇಲಾಖೆ ಹೆಸರು:- ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL).
ಉದ್ಯೋಗ ಸ್ಥಳ:- ಬೆಂಗಳೂರು…
ನೇಮಕಾತಿ ವಿಧಾನ:- ಹೊರಗುತ್ತಿಗೆ ಆಧಾರದ ಮೇಲೆ
ಒಟ್ಟು ಹುದ್ದೆಗಳ ಸಂಖ್ಯೆ:- 96

ಹುದ್ದೆಗಳ ವಿವರ:-
● ಸ್ಟೇಷನ್ ಕಂಟ್ರೋಲರ್ (SC)
● ಟ್ರೈನ್ ಆಪರೇಟರ್ (TO)

ವೇತನ ಶ್ರೇಣಿ:- 35,000 ದಿಂದ 82,660 ಮಾಸಿಕವಾಗಿ…

ಶೈಕ್ಷಣಿಕ ವಿದ್ಯಾರ್ಹತೆ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತಿಯುಳ್ಳ ಆಕಾಂಕ್ಷಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ ಅಥ ಟೆಲಿಕಮ್ಯುನಿಕೇಶನ್ಸ್ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ಅಥವಾ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ ಅಥವಾ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಆರ್ಮೆಡ್ ಟ್ರೇಡ್ನಲ್ಲಿ ತತ್ಸಮಾನ ವಿದ್ಯಾರ್ಹತೆಯಲ್ಲಿ ಮೂರು ವರ್ಷಗಳ ಡಿಪ್ಲೋಮಾ ಮುಗಿಸಿರಬೇಕು.
● ಮಾಜಿ ಮಿಲಿಟರಿ ಸಿಬ್ಬಂದಿಗಳಿಗೆ ಮೊದಲ ಆದ್ಯತೆ.

ವಯಸ್ಸಿನ ಮಿತಿ:-
● ಕನಿಷ್ಠ 18 ವರ್ಷಗಳು
● ಗರಿಷ್ಠ 45 ವರ್ಷಗಳು

ಅರ್ಜಿ ಸಲ್ಲಿಸುವ ವಿಧಾನ:-
● BMRCL ಅಧಿಕೃತ ವೆಬ್ ಸೈಟ್ ಗೆ ಭೇಟಿ ಕೊಡಿ.
ವೃತ್ತಿ / ನೇಮಕಾತಿ ಎನ್ನುವ ಆಪ್ಷನ್ ಮೇಲೆ ಕ್ಲಿಕ್ ಮಾಡಿ.
● ಲಾಗ್ ಇನ್ ಆಗಿ ಮೊದಲ ಬಾರಿಗೆ ಅರ್ಜಿ ಸಲ್ಲಿಸುವವರಾಗಿದ್ದರೆ ರಿಜಿಸ್ಟರ್ ಮಾಡಿ ಲಾಗಿನ್ ಆಗಿ.
● ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸಬೇಕು ಅದರ ಅರ್ಜಿ ಫಾರಂ ಅನ್ನು ಭರ್ತಿ ಮಾಡಿ.
● ಪಾಸ್ಪೋರ್ಟ್ ಸೈಜ್ ಫೋಟೋ ಮತ್ತು ಸಹಿ ಕೂಡ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
● ಅರ್ಜಿ ಸಲ್ಲಿಕೆ ಪೂರ್ತಿಯಾದ ಬಳಿಕ ಆ ಹಾರ್ಡ್ ಕಾಪಿಯನ್ನು ತೆಗೆದುಕೊಂಡು ಸಂಸ್ಥೆಯ ವಿಳಾಸಕ್ಕೆ ಕಳುಹಿಸಿಕೊಡಿ.

ವಿಳಾಸ:-
ಜನರಲ್ ಮ್ಯಾನೇಜರ್ (HR),
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್,
III ಮಹಡಿ, BMTC ಕಾಂಪ್ಲೆಕ್ಸ್, K.H ರಸ್ತೆ,
ಶಾಂತಿನಗರ, ಬೆಂಗಳೂರು – 560027

ಆಯ್ಕೆ ವಿಧಾನ:-
● ಲಿಖಿತ ಪರೀಕ್ಷೆ
● ಸೈಕೋಮೆಟ್ರಿಕ್ ಪರೀಕ್ಷೆ
● ಕೌಶಲ್ಯ ಪರೀಕ್ಷೆ
● ಸಂದರ್ಶನ

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 16 ಮೇ, 2023.
● ಅರ್ಜಿ ಸಲ್ಲಿಸಲು ಕಡೆ ದಿನಾಂಕ – 31 ಮೇ, 2023.

*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*