Sunday, May 28, 2023
HomeJob News10ನೇ ತರಗತಿ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ, ವೇತನ 50 ಸಾವಿರ ಆಸಕ್ತರು...

10ನೇ ತರಗತಿ ಪಾಸ್ ಆದವರಿಗೆ ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ, ವೇತನ 50 ಸಾವಿರ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಕರ್ನಾಟಕದಲ್ಲಿರುವ ಎಲ್ಲ ಉದ್ಯೋಗ ಆಕಾಂಕ್ಷಿಗಳಿಗೂ ಸಿಹಿ ಸುದ್ದಿ. ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,828 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು ಕರ್ನಾಟಕದ ಅಂಚೆ ವೃತ್ತದಲ್ಲಿ 48 ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿಗಾಗಿ ಇಲಾಖೆ ವತಿಯಿಂದಲೇ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ.

ವಯಸ್ಸಿನ ಮಿತಿಯಲ್ಲೂ ಕೂಡ ಬಾರಿ ಸಡಿಲಿಕೆ ಇದ್ದು, ಕರ್ನಾಟಕದಲ್ಲಿರುವ ಎಲ್ಲಾ ಪುರುಷ ಮತ್ತು ಮಹಿಳಾ ಆಸಕ್ತ ಅಭ್ಯರ್ಥಿಗಳು ಕೂಡ ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಅಂಕಣದಲ್ಲಿ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಅಧಿಸೂಚನೆಯಲ್ಲಿರುವ ಪ್ರಮುಖ ಅಂಶಗಳಾದ ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಬೇಕಾಗುವ ದಾಖಲೆಗಳು ಅರ್ಜಿ ಸಲ್ಲಿಸಲು ಇರುವ ಕಡೆ ದಿನಾಂಕ, ಉದ್ಯೋಗ ಸ್ಥಳ ಮತ್ತು ಹುದ್ದೆಯ ವಿವರದ ಕುರಿತ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ.

ಇಲಾಖೆ:- ಭಾರತೀಯ ಅಂಚೆ ಇಲಾಖೆ.
ನೇಮಕಾತಿ:- ಪೋಸ್ಟ್ ಆಫೀಸ್ ನೇಮಕಾತಿ 2023.
ಕೆಲಸದ ಸ್ಥಳ:- ಕರ್ನಾಟಕದಾದ್ಯಂತ…

ಹುದ್ದೆಯ ಹೆಸರು:-
● ಗ್ರಾಮೀಣ ಢಕ್ ಸೇವಕ್
● ಬ್ರಾಂಚ್ ಪೋಸ್ಟ್ ಮಾಸ್ಟರ್
● ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್

ಒಟ್ಟು ಹುದ್ದೆಗಳ ಸಂಖ್ಯೆ:- 48.

ವೇತನ ಶ್ರೇಣಿ:-
● ಗ್ರಾಮೀಣ ಢಕ್ ಸೇವಕ್ – 10,000 ದಿಂದ 24,470.
● ಬ್ರಾಂಚ್ ಪೋಸ್ಟ್ ಮಾಸ್ಟರ್ – 12,000 ದಿಂದ 29,350.
● ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ – 10,000 ದಿಂದ 24,470.

ಶೈಕ್ಷಣಿಕ ವಿದ್ಯಾರ್ಹತೆ:- ಅಂಚೆ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ SSLC, PUC ಅಥವಾ ತತ್ಸಮಾನ ತರಗತಿ ಉತ್ತೀರ್ಣವಾಗಿರುವವರು ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮಿತಿ:-
● ಕನಿಷ್ಠ 18 ವರ್ಷಗಳು
● ಗರಿಷ್ಠ 40 ವರ್ಷಗಳು

ವಯೋಮಿತಿ ಸಡಿಲಿಕೆ:-
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು.
● OBC ಅಭ್ಯರ್ಥಿಗಳಿಗೆ 3 ವರ್ಷಗಳು.
● PWD ಅಭ್ಯರ್ಥಿಗಳಿಗೆ 10 ವರ್ಷಗಳು.

ಅರ್ಜಿ ಶುಲ್ಕ:-
● SC/ST, PWD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ.
● ಉಳಿದ ಅಭ್ಯರ್ಥಿಗಳಿಗೆ 100 ರೂ.
● ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಆನ್ಲೈನ್ ಬ್ಯಾಂಕಿಂಗ್ ಮೂಲಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ…
● ಆಕಾಂಕ್ಷಿಗಳು ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಟ್ಟು ಅರ್ಜಿ ಫಾರಂ ಅಲ್ಲಿ ಸವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೇಳಲಾಗುವ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು.
● ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿ ಮಾಡಿದ ನಂತರವಷ್ಟೇ ಸಲ್ಲಿಕೆ ಪ್ರಕ್ರಿಯೆ ಪೂರ್ತಿಗೊಳ್ಳುತ್ತದೆ.
● ಅರ್ಜಿ ಸಲ್ಲಿಕೆ ಪೂರ್ತಿಕೊಂಡ ನಂತರ ವಿನಂತಿ ಸಂಖ್ಯೆ ಮತ್ತು ಅರ್ಜಿ ಸಂಖ್ಯೆಯನ್ನು ನೋಟ್ ಮಾಡಿ ಇಟ್ಟುಕೊಳ್ಳಿ.

ಕೇಳಲಾಗುವ ಪ್ರಮುಖ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ
● ಆಧಾರ್ ಕಾರ್ಡ್
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರ
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಇನ್ನಿತರ ಯಾವುದೇ ಪ್ರಮುಖ ದಾಖಲೆಗಳು

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 22.05.2023.
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21.06.2023.