ಹಾಸ್ಟೆಲ್ ವಾರ್ಡನ್ ಹುದ್ದೆಗಳ ನೇಮಕಾತಿ, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ. ವೇತನ 92,300/-

 

ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಈ ಬಾರಿ ಸುಮಾರು 4,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಭಾರತದಾತ್ಯಂತ ಇರುವ ಈ ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸಲು ಬೋಧಕವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಅತಿ ದೊಡ್ಡ ನೇಮಕಾತಿ ನಡೆಯುತ್ತಿದೆ. ಈ ಹುದ್ದೆಗಳಿಗೆ ಕರ್ನಾಟಕದಾದ್ಯಂತ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ.

ಈಗಾಗಲೇ ನೋಟಿಫಿಕೇಶನಲ್ಲಿ ತಿಳಿಸಿರುವಂತೆ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷೆಯನ್ನು ಎದುರಿಸುವ ಮೂಲಕ ಹುದ್ದೆಯನ್ನು ಪಡೆದುಕೊಳ್ಳಬಹುದು. ಸುಮಾರು 600ಕ್ಕೂ ಹೆಚ್ಚು ವಾರ್ಡನ್ ಹುದ್ದೆಗಳು ಖಾಲಿ ಇವೆ. ಇದನ್ನು ಪಡೆಯಲು ಪದವಿ ಪಡೆದ ಎಲ್ಲಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಿ ಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ.

ಉದ್ಯೋಗ ಸಂಸ್ಥೆ:- ಏಕಲವ್ಯ ಮಾದರಿ ವಸತಿ ಶಾಲೆ
ಹುದ್ದೆಗಳ ಹೆಸರು:-
● ಹಾಸ್ಟೆಲ್ ವಾರ್ಡನ್ (ಮಹಿಳೆ)
● ಹಾಸ್ಟೆಲ್ ವಾರ್ಡನ್ (ಪುರುಷ)

ಒಟ್ಟು ಹುದ್ದೆಗಳ ಸಂಖ್ಯೆ:- 669
● ಹಾಸ್ಟೆಲ್ ವಾರ್ಡನ್ (ಮಹಿಳೆ) – 335
● ಹಾಸ್ಟೆಲ್ ವಾರ್ಡನ್ (ಪುರುಷ) – 334

ಉದ್ಯೋಗ ಸ್ಥಳ:- ಭಾರತದಾತ್ಯಂತ…
ವೇತನ ಶ್ರೇಣಿ:- ಈ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ 29,200 ರಿಂದ 92,300 ವೇತನ ಸಿಗುತ್ತದೆ.

ಶೈಕ್ಷಣಿಕ ವಿದ್ಯಾರ್ಹತೆ:-
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಉತ್ತೀರ್ಣರಾಗಿರಬೇಕು.

ವಯೋಮಿತಿ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
● ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 32 ವರ್ಷಗಳು
● SC/ST ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 37 ವರ್ಷಗಳು
● OBC ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷಗಳು
● PWDಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 42 ವರ್ಷಗಳು.

ಅರ್ಜಿ ಶುಲ್ಕ:-
● ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿ ಮಾಡಬೇಕು.
SC/ ST/ PWD ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
● ಉಳಿದ ವಿದ್ಯಾರ್ಥಿಗಳಿಗೆ ಅರ್ಜಿ ಶುಲ್ಕ 1000ರೂ.

ಅರ್ಜಿ ಸಲ್ಲಿಸುವ ವಿಧಾನ:-
● ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಏಕಲವ್ಯ ಮಾದರಿ ವಸತಿ ಶಾಲೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು ಆನ್ಲೈನಲ್ಲಿ ಅರ್ಜಿ ಸಲ್ಲಿಸಬೇಕು.
● ವೆಬ್ಸೈಟ್ ಓಪನ್ ಆದಮೇಲೆ ಅರ್ಜಿ ಸಲ್ಲಿಸಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು ಹಾಗೆಯೇ ನೆಟ್ ಬ್ಯಾಂಕಿಂಗ್ ಮೂಲಕ ಆನ್ಲೈನ್ ಶುಲ್ಕವನ್ನು ಕೂಡ ಪಾವತಿ ಮಾಡಬೇಕು
● ಅರ್ಜಿ ಸಲ್ಲಿಕೆ ಪೂರ್ತಿ ಆದ ಬಳಿಕ ಭವಿಷ್ಯದ ಬಳಕೆಗಾಗಿ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಬೇಕು.

ಆಯ್ಕೆ ವಿಧಾನ:-
● ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೂ OMR ಆಧಾರಿತ ಲಿಖಿತ ಪರೀಕ್ಷೆ ನಡೆಸಲಾಗುವುದು.
● ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
● ಕರ್ನಾಟಕದ ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗಳು ನಡೆಯಲಿದೆ.

ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 18.07.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 18.08.2023
● ಅರ್ಜಿ ಶುಲ್ಕ ಪಾವತಿಗೆ ಕೊನೆಯ ದಿನಾಂಕ – 18.08.2023.

Leave a Comment