ಒಂದು ಕುಟುಂಬದಲ್ಲಿ ಒಬ್ಬ ವ್ಯಕ್ತಿ ಸರ್ಕಾರಿ ಹುದ್ದೆ ಗಿಟ್ಟಿಸಿಕೊಂಡರೆ ಇಡೀ ಕುಟುಂಬವೇ ಗೆದ್ದಂತೆ, ಅದು ಇಡೀ ಕುಟುಂಬದ ಕನಸಾಗಿರುತ್ತದೆ, ಗೆಲುವಾಗಿರುತ್ತದೆ. ಬಡ ಕುಟುಂಬದಲ್ಲಿ ಬೆಳೆದ ಸರ್ಕಾರಿ ಶಾಲೆಯಲ್ಲಿ ಓದಿದ ಸಾಮಾನ್ಯ ಹುಡುಗನೊಬ್ಬ ತನ್ನ ಕಠಿಣ ಪರಿಶ್ರಮ ಹಾಗೂ ಶ್ರದ್ಧೆಯಿಂದ ಸಾಧಿಸಬಹುದಾದ ಅತ್ಯುನ್ನತ ಸಾಧನೆ ಎಂದರೆ ಸರ್ಕಾರಿ ಹುದ್ದೆ ಪಡೆಯುವುದು.
ಈ ಮೂಲಕ ಜೀವನವನ್ನು ಉನ್ನತ ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಜೀವನ ಕಳೆಯುವುದು ಹಾಗೂ ಇಡೀ ಕುಟುಂಬಕ್ಕೆ ಆಧಾರವಾಗುವುದು. ಹಾಗಾಗಿ ದೇಶದಲ್ಲಿ ಲಕ್ಷಾಂತರ ಅಭ್ಯರ್ಥಿಗಳು ಈ ರೀತಿ ಒಂದು ಸರ್ಕಾರಿ ಉದ್ಯೋಗ ಸಿಕ್ಕಿದರೆ ಸಾಕು ಎಂದು ಕನಸು ಕಾಣುತ್ತಿದ್ದಾರೆ.
ಅವರಿಗೆಲ್ಲ ಕೇಂದ್ರ ಸರ್ಕಾರದ ವ್ಯಕ್ತಿಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ಕೇಂದ್ರ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಹೀಗಿದೆ ನೋಡಿ.
ನೇಮಕಾತಿ ಸಂಸ್ಥೆ:- ಕೇಂದ್ರ ಗುಪ್ತಚರ ಇಲಾಖೆ
ಹುದ್ದೆಯ ಹೆಸರು:- ಅಸಿಸ್ಟೆಂಟ್ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್-2 / ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು:- 995 ಹುದ್ದೆಗಳು
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 44,900 ರಿಂದ ರೂ.1,42,400 ವೇತನ ಸಿಗುತ್ತದೆ.
ಉದ್ಯೋಗ ಸ್ಥಳ:- ಆಯ್ಕೆ ಆಗುವ ಅಭ್ಯರ್ಥಿಗಳು ಭಾರತದಾದ್ಯಂತ ವಿವಿಧ ಭಾಗಗಳಗಳಲ್ಲಿ ಹುದ್ದೆ ಮಾಡಲು ತಯಾರಾಗಿರಬೇಕು.
ಶೈಕ್ಷಣಿಕ ವಿದ್ಯಾರ್ಹತೆ:-
* ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಪಡೆದಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು.
* ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಟ ವಯೋಮಿತಿ 18 ವರ್ಷ
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 27 ವರ್ಷಗಳು.
ವಯೋಮಿತಿ ಸಡಿಲಿಕೆ:-
* SC / ST ಅಭ್ಯರ್ಥಿಗಳಿಗೆ 05 ವರ್ಷ
* OBC ಅಭ್ಯರ್ಥಿಗಳಿಗೆ 03 ವರ್ಷ
ಅರ್ಜಿ ಸಲ್ಲಿಸುವ ವಿಧಾನ:-
* www.mha.gov.in ಅಥವಾ www.ncs.gov.in ಈ ಅಧಿಕೃತ ವೆಬ್ ಸೈಟ್ ಗೆ ಭೇಟಿಕೊಟ್ಟು ಅರ್ಜಿ ಫಾರಂ ಲಿಂಕ್ ಕ್ಲಿಕ್ ಮಾಡಿ ಕೇಳಲಾಗುವ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬೇಕು.
* ಅರ್ಜಿ ಶುಲ್ಕ ಪಾವತಿ ಮಾಡಿರುವ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು ಮತ್ತು ಅರ್ಜಿ ಶುಲ್ಕ ಪಾವತಿ ಮಾಡಿದ ನಂತರ ಇ-ರಶೀತಿ ಹಾಗೂ ಅರ್ಜಿ ಸಲ್ಲಿಕೆ ಆದ ನಂತರ ಪ್ರಿಂಟ್ ಔಟ್ ಪಡೆದುಕೊಳ್ಳಬೇಕು.
ಅರ್ಜಿ ಶುಲ್ಕ:-
* ಪರೀಕ್ಷಾ ಶುಲ್ಕ ರೂ.100
* ನೇಮಕಾತಿ ಪ್ರಕ್ರಿಯೆ ಶುಲ್ಕ ರೂ.450
* ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ಕಂಪ್ಯೂಟರ್ ಸ್ಕಿಲ್ ಟೆಸ್ಟ್
* ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 25, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 15, 2023
ಬೇಕಾಗುವ ದಾಖಲೆಗಳು:-
* ಇತ್ತೀಚಿನ ಭಾವಚಿತ್ರ ಮತ್ತು ಸಹಿ
* ಮೊಬೈಲ್ ಸಂಖ್ಯೆ ಮತ್ತು ಇ-ಮೇಲ್ ಐಡಿ
* ಆಧಾರ್ ಕಾರ್ಡ್
* ಶೈಕ್ಷಣಿಕ ಅಂಕ ಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಇನ್ನಿತರ ಪ್ರಮುಖ ದಾಖಲೆಗಳು