ಪ್ರತಿಯೊಬ್ಬ ವಿದ್ಯಾರ್ಥಿಗೂ ಕೂಡ ತನ್ನ ವಿದ್ಯಾಭ್ಯಾಸ ಮುಗಿದ ಬಳಿಕ ಒಂದೊಳ್ಳೆ ಕಂಪನಿಯಲ್ಲಿ ಅತಿ ಹೆಚ್ಚು ವೇತನವನ್ನು ಪಡೆಯುವ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎನ್ನುವ ಹಂಬಲ ಇರುತ್ತದೆ. ಇನ್ನು ಕೆಲವು ವಿದ್ಯಾರ್ಥಿಗಳಿಗೆ ತಾವು ಸರ್ಕಾರಿ ಹುದ್ದೆ (Government job) ಕಟ್ಟಿಸಿಕೊಂಡು ಈ ಮೂಲಕ ಸರ್ಕಾರಕ್ಕೆ ಹಾಗೂ ಜನರಿಗೆ ಸೇವೆ ಮಾಡಬೇಕು ಎಂದು ಬಯಸಿರುತ್ತಾರೆ.
.
ಈ ರೀತಿ ಸರ್ಕಾರಿ ಹುದ್ದೆಗಳ ಆಕಾಂಕ್ಷಿಗಳಾಗಿರುವವರಿಗೆ (Aspirents) ಪ್ರತಿ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರೀಕ್ಷೆಗಳನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಖಾಲಿ ಇರುವ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳುತ್ತದೆ. ಈಗ ಕೇಂದ್ರ ಸರ್ಕಾರದ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆ ಹೊರಡಿಸಿ (SSC recruitments) ವಿವಿಧ ವಿಭಾಗದಲ್ಲಿ ಖಾಲಿ ಇರುವ 1324 ಹುದ್ದೆಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನ ಮಾಡಿದೆ.
ಈ ಹುದ್ದೆಗಳಿಗೆ ಅರ್ಹತೆ ಇರುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ, ಪರೀಕ್ಷೆಗಳನ್ನು ಎದುರಿಸಿ ಹುದ್ದೆ ಗಿಟ್ಟಿಸಿಕೊಳ್ಳಬಹುದು. ದೇಶದ ಎಲ್ಲಾ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಹೊರಡಿಸಿರುವ ಅಧಿಸೂಚನೆಯಲ್ಲಿರುವ ವಿದ್ಯಾರ್ಹತೆ ಮತ್ತು ಶೈಕ್ಷಣಿಕ ಅರ್ಹತೆಯನ್ನು ಹೊಂದಿದ್ದೇವೆ ಎಂದು ಖಚಿತಪಡಿಸಿಕೊಳ್ಳುವುದು ಉತ್ತಮ.
ಹಾಗಾಗಿ ಅರ್ಜಿ ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಳಲಾಗುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ, ಆಯ್ಕೆಯಾಗುವವರಿಗೆ ಸಿಗುವ ವೇತನ ಇತ್ಯಾದಿ ವಿವರಗಳನ್ನು ತಿಳಿಸಿಕೊಡುತ್ತಿದ್ದೇವೆ.
ನೇಮಕಾತಿ ಸಂಸ್ಥೆ:- ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC).
ಹುದ್ದೆಗಳ ಹೆಸರು:- ಜೂನಿಯರ್ ಇಂಜಿನಿಯರ್ (JE) ಸಿವಿಲ್ ಇಂಜಿನಿಯರ್ (Civil)
ಮೆಕಾನಿಕ್ ಇಂಜಿನಿಯರ್ (Mechanical)
ಇಲೆಕ್ಟ್ರಾನಿಕ್ ಇಂಜಿನಿಯರ್ (Electronics)
ಒಟ್ಟು ಹುದ್ದೆಗಳ ಸಂಖ್ಯೆ:- 1324.
ಉದ್ಯೋಗ ಸ್ಥಳ:- ಭಾರತದಾತ್ಯಂತ.
ವೇತನ ಶ್ರೇಣಿ:- 35,400 ರಿಂದ 1,12,400.
ಶೈಕ್ಷಣಿಕ ವಿದ್ಯಾರ್ಹತೆ:-
ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿದ್ಯಾಸಂಸ್ಥೆಯಿಂದ ಸಿವಿಲ್ / ಮೆಕ್ಯಾನಿಕಲ್/ ಇಲೆಕ್ಟ್ರಿಕಲ್ ವಿಭಾಗದಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ಪದವಿ ಪಡೆದಿರಬೇಕು.
ವಯೋಮಿತಿ:-
● ಸೆಂಟ್ರಲ್ ಪಬ್ಲಿಕ್ ವರ್ಕ್ ಡಿಪಾರ್ಟ್ಮೆಂಟ್ ವಿಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 32 ವರ್ಷಗಳು.
● ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 30 ವರ್ಷಗಳು.
ವಯೋಮಿತಿ ಸಡಿಲಿಕೆ:-
● OBC ಅಭ್ಯರ್ಥಿಗಳಿಗೆ 3 ವರ್ಷಗಳು
● SC/ST ಅಭ್ಯರ್ಥಿಗಳಿಗೆ 5 ವರ್ಷಗಳು
● ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಶುಲ್ಕ:-
● ಆನ್ಲೈನ್ ನಲ್ಲಿ ಕ್ರೆಡಿಟ್ ಕಾರ್ಡ್/ ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬೇಕು.
● SC/ST ಮತ್ತು ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
● ಉಳಿದ ಅಭ್ಯರ್ಥಿಗಳಿಗೆ 100ರೂ.
ಪರೀಕ್ಷಾ ಕೇಂದ್ರಗಳು:-
ಕರ್ನಾಟಕದ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರು ಶಿವಮೊಗ್ಗ, ಹುಬ್ಬಳ್ಳಿ, ಕಲ್ಬುರ್ಗಿ, ಮಂಗಳೂರು, ಉಡುಪಿ ಮತ್ತು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:-
● ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು SSC ಅಧಿಕೃತ ವೆಬ್ಸೈಟ್ ಗೆ ಭೇಟಿ ಕೊಟ್ಟು, ಅರ್ಜಿ ಫಾರಂ ನಲ್ಲಿ ಕೇಳುವ ವಿವರಗಳಲ್ಲಿ ಸರಿಯಾದ ಮಾಹಿತಿಗಳನ್ನು ತುಂಬಿಸಿ ಪೂರಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
● ಅರ್ಜಿ ಶುಲ್ಕ ಪಾವತಿಯಾದ ಬಳಿಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ತಿಗೊಳ್ಳುತ್ತದೆ.
● ಭವಿಷ್ಯದ ಬಳಕೆಗಾಗಿ ಸಲ್ಲಿಸಿರುವ ರೆಫರೆನ್ಸ್ ನಂಬರನ್ನು ಬರೆದು ಇಟ್ಟುಕೊಳ್ಳಬೇಕು ಅಥವಾ ಅರ್ಜಿ ಸಲ್ಲಿಕೆ ಪತ್ರವನ್ನು ಪ್ರಿಂಟ್ ಔಟ್ ತೆಗೆದು ಇಟ್ಟುಕೊಳ್ಳಬೇಕು.
ಪ್ರಮುಖ ದಾಖಲೆಗಳು:-
● ಇತ್ತೀಚಿನ ಭಾವಚಿತ್ರ ಮತ್ತು ಸಹಿ
● ಮೊಬೈಲ್ ಸಂಖ್ಯೆ ಮತ್ತು e-mail ID
● ಆಧಾರ್ ಕಾರ್ಡ್
● ಜಾತಿ ಮತ್ತು ಆದಾಯ ಪ್ರಮಾಣ ಪತ್ರ
● ಶೈಕ್ಷಣಿಕ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
● ನಿವಾಸ ದೃಢೀಕರಣ ಪತ್ರ
● ಇನ್ನಿತರ ಪ್ರಮುಖ ದಾಖಲೆಗಳು.
ಆಯ್ಕೆ ವಿಧಾನ:-
● ಕಂಪ್ಯೂಟರ್ ಆಧಾರಿತ ಪರೀಕ್ಷೆ
● ಸಂದರ್ಶನ
● ದಾಖಲೆಗಳ ಪರಿಶೀಲನೆ.
ಪ್ರಮುಖ ದಿನಾಂಕಗಳು:-
● ಅರ್ಜಿ ಸಲ್ಲಿಸಲು ಆರಂಭ ದಿನಾಂಕ – 26.07.2023
● ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16.08.2023
● ಅರ್ಜಿ ಶುಲ್ಕ ಪಾವತಿಗೆ ಕಡೇ ದಿನಾಂಕ – 16.08.2023.