ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ ವಿದ್ಯಾರ್ಥಿ ಬಳಗಕ್ಕೆ ಫೆಬ್ರವರಿ ತಿಂಗಳ ಅಂತ್ಯದಲ್ಲಿ ಸಾಲು ಸಾಲು ಕೊಡುಗೆಗಳನ್ನು ನೀಡಲಾಗುತ್ತಿದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಹಾಗಾಗಿ ರಾಜ್ಯ ಸರ್ಕಾರವು ಘೋಷಿಸುವ ಬಜೆಟ್ ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾವಾಗಲು ಮೀಸಲು ಇದ್ದೇ ಇರುತ್ತದೆ.
ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಕಾಲೇಜುಗಳು ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಉಚಿತ ಹಾಲು, ಮೊಟ್ಟೆ, ಬಿಸಿಯೂಟ ವಿತರಣೆ, ವಿದ್ಯಾರ್ಥಿ ಕಿಟ್, ಉಚಿತ ಸಮವಸ್ತ್ರ ವಿತರಣೆ, ಸಹಾಯಧನ ಸೇರಿದಂತೆ ಸಾಕಷ್ಟು ನೆರವು ನೀಡಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಈ ಯೋಜನೆಗಳನ್ನು ಪರೀಷ್ಕರಿಸಿ ಅಥವಾ ಹೊಸ ಯೋಜನೆಗಳನ್ನು ಇದಕ್ಕೆ ಸೇರ್ಪಡೆ ಮಾಡಿ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ.
ಅಂತೆಯೇ ಈ ತಿಂಗಳಲ್ಲಿ ಕೂಡ ರಾಜ್ಯದ ವಿದ್ಯಾರ್ಥಿಗಳಿಗಾಗಿ ಸರ್ಕಾರ ಕೈಗೊಂಡಿರುವ ವಿಶೇಷ ಯೋಜನೆಗಳ ಬಗ್ಗೆ 27 ಫೆಬ್ರವರಿ 2024ರಂದು ಅಧಿಕೃತ ಘೋಷಣೆ ಮಾಡುವ ನಿರೀಕ್ಷಗ ಇದೆ. ಈ ಮಾಹಿತಿ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿದರೆ ಸರ್ಕಾರದ ಉದ್ದೇಶವು ಈಡೇರಿದಂತಾಗುತ್ತದೆ ಮತ್ತು ವಿದ್ಯಾರ್ಥಿಯು ಕೂಡ ಈ ಸೌಲಭ್ಯಗಳನ್ನು ಸರ್ಕಾರದಿಂದ ಪಡೆಯಲು ಅನುಕೂಲವಾಗುತ್ತದೆ ಹಾಗಾಗಿ ತಪ್ಪದೆ ಈ ಮಾಹಿತಿಯನ್ನು ಎಲ್ಲ ವಿದ್ಯಾರ್ಥಿಗಳ ಜೊತೆಗೂ ಕೂಡ ಹಂಚಿಕೊಳ್ಳಿ.
ಈ ಸುದ್ದಿ ಓದಿ:- ಸಂಕಷ್ಟಗಳು ದೂರವಾಗಿ ಲಕ್ಷ್ಮಿ ಕೃಪೆಯಿಂದ ಧನಾಮನವಾಗಬೇಕು ಎಂದರೆ ಜೋಡಿ ನವಲುಗರಿಯನ್ನು ಮನೆಯ ಈ ಜಾಗದಲ್ಲಿಡಿ…
* ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ರಾಜ್ಯದಾದ್ಯಂತ SSLC ಮತ್ತು ದ್ವಿತೀಯ PUC ಪರೀಕ್ಷೆ ನಡೆಯಲಿದೆ. ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ಎದುರಿಸುತ್ತಿದ್ದಾರೆ. ಸರ್ಕಾರವು ದೂರದ ಪರೀಕ್ಷಾ ಕೇಂದ್ರಗಳಿಗೆ ತೆರಳಿ, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಉಚಿತವಾಗಿ KSRTC ಮತ್ತು BMTC ಗಳಲ್ಲಿ ಪ್ರಯಾಣ ಮಾಡಲು ಅನುಮತಿ ನೀಡಿದೆ.
ಈಗಾಗಲೇ ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ, ಇದು ವಿದ್ಯಾರ್ಥಿನಿಯರಿಗೂ ಕೂಡ ಅನ್ವಯಿಸುತ್ತಿದೆ. ಹೊರ ರಾಜ್ಯಗಳಿಂದ ಬಂದು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಹೆಣ್ಣು ಮಕ್ಕಳು ಮತ್ತು ವಿದ್ಯಾರ್ಥಿಗಳು ಪರೀಕ್ಷೆಯ ಹಾಲ್ ಟಿಕೆಟ್ ತೋರಿಸಿ ಪರೀಕ್ಷೆ ಇರುವ ದಿನಗಳಲ್ಲಿ ಉಚಿತ ಪ್ರಯಾಣ ಮಾಡಬಹುದು.
* ಶಾಲೆಗಳಲ್ಲಿ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ವಿತರಣೆ ಮಾಡಲಾಗುತ್ತಿದೆ ಇನ್ನು ಮುಂದೆ ಇದರ ಜೊತೆ ರಾಗಿ ಮಾಲ್ಟ್ ನೀಡಬೇಕು ಎಂದು ಕೂಡ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗುವ ವೇಳೆಗೆ ಇದು ಕಾರ್ಯರೂಪಕ್ಕೆ ಬರಲಿದೆ.
ಈ ಸುದ್ದಿ ಓದಿ:- ಬಿಳಿ ಸಾಸಿವೆಯಿಂದ ಈ ಕೆಲಸ ಮಾಡಿ ಸಾಕು, ಆದಷ್ಟು ಬೇಗ ನಿಮಗೆ ಸ್ವಂತ ಮನೆ ಕಟ್ಟುವ ಯೋಗ ಬರುತ್ತದೆ, ಎಲ್ಲಾ ವಿಘ್ಞಗಳು ನಿವಾರಣೆಯಾಗುತ್ತವೆ.!
* BJP ಸರ್ಕಾರವು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ವೇಳೆ ಎಂಟನೇ ತರಗತಿಯ ಮಕ್ಕಳಿಗೆ ಉಚಿತ ಸೈಕಲ್ ವಿತರಣೆ ಯೋಜನೆ ಜಾರಿಗೆ ತಂದಿತ್ತು, ಕಾರಣಾಂತರಗಳಿಂದ ಇದು ಸ್ಥಗಿತವಾಗಿತ್ತು. ಈ ವರ್ಷ ಸಿದ್ದರಾಮಯ್ಯ ಸರ್ಕಾರವು ಇದನ್ನು ಮುಂದುವರಿಸಲು ನಿರ್ಧರಿಸಿದ್ದು 2024-25ನೇ ಸಾಲಿನ ಶೈಕ್ಷಣಿಕ ತರಬೇತಿಗಳು ಆರಂಭವಾದ ಸಮಯಕ್ಕೆ ಸೈಕಲ್ ವಿತರಣೆ ನಡೆಯಲಿದೆ.
* ರಾಜ್ಯದ ವಿದ್ಯಾರ್ಥಿಗಳಿಗೆ ಹಲವು ಬಗೆಯ ಸ್ಕಾಲರ್ಷಿಪ್ ನೀಡಲಾಗುತ್ತದೆ. ಸರ್ಕಾರದ ವತಿಯಿಂದ ರೈತರ ಮಕ್ಕಳಿಗೆ ರೈತಸಿರಿವಿದ್ಯಾರ್ಥಿ ವೇತನ ಯೋಜನೆ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೈಸ್ ಮನಿ ಸ್ಕಾಲರ್ಶಿಪ್ ಇನ್ನೂ ಮುಂತಾದ ಅನೇಕ ಬಗೆಯ ಸ್ಕಾಲರ್ಶಿಪ್ ನೀಡಲಾಗುತ್ತಿದೆ.
1ನೇ ತರಗತಿಯಿಂದ ಸ್ನಾತಕೋತ್ತರ ಪದವಿ ತನಕ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್‌ಗಳನ್ನು ಪಡೆದುಕೊಳ್ಳಲು ಅರ್ಹರಿರುತ್ತಾರೆ. ಶೀಘ್ರದಲ್ಲಿ ಈ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ ಕಾರ್ಯಕ್ರಮ ನಡೆಯಲಿದೆ.